Fri. Aug 7th, 2026

ಶೀಘ್ರದಲ್ಲೇ ಬಿಜೆಪಿಗೆ ಮರಳಲಿದ್ದೇನೆ: ಮೈಸೂರಿನಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಹತ್ವದ ಹೇಳಿಕೆ

Share this with Friends

ಮೈಸೂರು:ತಾವು ಶೀಘ್ರದಲ್ಲೇ ಭಾರತೀಯ ಜನತಾ ಪಾರ್ಟಿಗೆ (ಬಿಜೆಪಿ) ಮರಳಲಿದ್ದು, ಮುಂಬರುವ ದಿನಗಳಲ್ಲಿ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಮಾಜಿ ; ಎಂ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಆಷಾಢ ಮಾಸದ ಕೊನೆಯ ಶುಕ್ರವಾರದ ಅಂಗವಾಗಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಪಕ್ಷದ ಹಿರಿಯರೊಂದಿಗೆ ಮಾತುಕತೆ:

ತಾವು ಪಕ್ಷಕ್ಕೆ ಮರಳಬೇಕೆಂದು ಬಿಜೆಪಿಯ ಹಿರಿಯ ಹಾಗೂ ಜವಾಬ್ದಾರಿಯುತ ನಾಯಕರು ಸತತವಾಗಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಈಶ್ವರಪ್ಪ ಬಹಿರಂಗಪಡಿಸಿದರು. “ನಾನು ಪಕ್ಷದ ಹಿರಿಯ ನಾಯಕರ ಮುಂದೆ ಕೆಲವು ಪ್ರಮುಖ ಮತ್ತು ಗಂಭೀರ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ. ನನ್ನ ನಿಲುವುಗಳಿಗೆ ಹಿರಿಯರಿಂದ ಸಕಾರಾತ್ಮಕ ಸ್ಪಂದನೆ ಸಿಗುವ ಸಂಪೂರ್ಣ ವಿಶ್ವಾಸವಿದೆ” ಎಂದು ಅವರು ಹೇಳಿದರು.

ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ:

ತಮ್ಮ ರಾಜಕೀಯ ನಿಷ್ಠೆಯನ್ನು ಪುನರುಚ್ಚರಿಸಿದ ಅವರು, “ನಾನು ಬಿಜೆಪಿಯನ್ನು ಬಿಟ್ಟು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಸಿದ್ಧಾಂತವಿದೆ. ಸದ್ಯದಲ್ಲೇ ಎಲ್ಲವೂ ಸುಖಾಂತ್ಯವಾಗಲಿದ್ದು, ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದೇನೆ” ಎಂದರು.

ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ:

ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಬಲಪಡಿಸುವ ಕುರಿತು ಮಾತನಾಡಿದ ಅವರು, ಹಿರಿಯರು ಮತ್ತು ಕಾರ್ಯಕರ್ತರು ಒಂದಾಗಿ ಶ್ರಮಿಸಿ, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುತ್ತೇವೆ ಎಂದು ಆಶಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಪ್ರಮುಖ ರಾಜಕೀಯ ಮುಖಂಡರು ಸಹ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

 


Share this with Friends

Related Post