Fri. Nov 1st, 2024

ನಗರತ್​ಪೇಟೆಯಲ್ಲಿ ಸಿಡಿದೆದ್ದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು

Share this with Friends

ಬೆಂಗಳೂರು,ಮಾ.19: ನಗರತ್​ಪೇಟೆಯ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ಈ‌ ಘಟನೆ ಸಂಬಂಧ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರಿಂದ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆ ಹಮ್ಮಿಕೊಂಡರು.

ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದರು.

ಆದರೆ ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಈ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನು ಎಳೆದರು, ಪೊಲೀಸರ ಈ ಕ್ರಮದ ವಿರುದ್ಧ ಸುರೇಶ್ ಕುಮಾರ್ ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಪೊಲೀಸರ ನಡೆಯನ್ನು ಖಂಡಿಸಿದರು.

ನಂತರ ಪೊಲೀಸರು ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ನಗರತ್ ಪೇಟೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


Share this with Friends

Related Post