Sat. Aug 29th, 2026

ಆರ್.ಎಸ್.ಎಸ್ ನಿಂದನೆ ಕೇಸ್: ಕೋರ್ಟ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ ಹಾಜರು, ಜಾಮೀನು ಮಂಜೂರು

Share this with Friends

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಅದರ ಸ್ವಯಂಸೇವಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪ ಎದುರಿಸುತ್ತಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಕೋರ್ಟ್ ನೀಡಿದ್ದ ಕಡ್ಡಾಯ ಹಾಜರಾತಿ ಸಮನ್ಸ್ ಹಿನ್ನೆಲೆಯಲ್ಲಿ ಶನಿವಾರ ಇಬ್ಬರೂ ನಾಯಕರು ನ್ಯಾಯಾಧೀಶರ ಮುಂದೆ ಖುದ್ದು ಹಾಜರಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು, ಇಬ್ಬರಿಗೂ ತಲಾ 10,000 ರೂಪಾಯಿಗಳ ವೈಯಕ್ತಿಕ ಬಾಂಡ್ ಹಾಗೂ ನ್ಯಾಯಾಲಯದ ಮುಂದಿನ ಸೂಚನೆಗಳನ್ವಯ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಜಾಮೀನು ನೀಡಿ ಆದೇಶ ಹೊರಡಿಸಿದರು.

ಪ್ರಕರಣದ ಹಿನ್ನೆಲೆ:

ಆರ್‌ಎಸ್‌ಎಸ್ ಸಂಘಟನೆಯ ಸಾರ್ವಜನಿಕ ಇಮೇಜ್‌ಗೆ ಧಕ್ಕೆ ತರುವ ನಿಟ್ಟಿನಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ಅವರು ಸಾಮಾಜಿಕ ಜಾಲತಾಣಗಳು ಹಾಗೂ ಯುಟ್ಯೂಬ್ ವಾಹಿನಿಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಗೌಡ ಎಂಬುವವರು ನ್ಯಾಯಾಲಯದಲ್ಲಿ ಖಾಸಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ನ್ಯಾಯಾಲಯವು, ವಿಚಾರಣೆಗೆ ಖುದ್ದು ಹಾಜರಾಗುವಂತೆ ನಾಯಕರಿಗೆ ಸಮನ್ಸ್ ಜಾರಿ ಮಾಡಿತ್ತು.

 

 

 


Share this with Friends

Related Post