Mon. Dec 23rd, 2024

ಸರ್ಕಾರಿ ನೌಕರರ ಸಂಘ,ಸಚಿವಾಲಯ ನೌಕರರ ಸಂಘದಿಂದ ಮಹಿಳಾ ದಿನಾಚರಣೆ

Share this with Friends

ಬೆಂಗಳೂರು, ಮಾ.19: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಸಹಯೋಗದಲ್ಲಿ ಇಂದು ವಿಶ್ವ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.

ಕಬ್ಬನ್ ಉದ್ಯಾನವನದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜಿನೀಶ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಲಿನಿ ರಜನೀಶ್, ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲೂ ಮುಂದೆ ಬರುತ್ತಿರುವುದು ಶ್ಲಾಘನೀಯ ‌ವಿಷಯ ಎಂದು ಸಂತಸ ವ್ಯಕ್ತ ಪಡಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯದ್ಯಕ್ಷ ಸಿ. ಎಸ್ ಷಡಕ್ಷರಿ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಾದ ಬಿ. ಬಿ ಕಾವೇರಿ, ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಬಿಬಿಎಂಪಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ಹಾಗೂ ಸರ್ಕಾರಿ ನೌಕರರ ಸಂಘದ ಹೇಮಲತಾ ಎಚ್. ಎಸ್, ರುಚಿತಾ ಬಿ, ಯಶೋಧ, ಕಲಾವತಿ ಮತ್ತಿತರರು ಪಾಲ್ಗೊಂಡಿದ್ದರು.


Share this with Friends

Related Post