Mon. Dec 23rd, 2024

ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ

Helmet
Share this with Friends

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಅಧಿಕಾರಿ, ಸಿಬ್ಬಂದಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹೆಲ್ಮೆಟ್ ಧರಿಸದ ಕಾರಣ ಅಪಘಾತ ಸಂಭವಿಸಿದಾಗ ಗಂಭೀರವಾಗಿ ಗಾಯಗೊಂಡಿದ್ದಾರೆ, ಕೆಲವರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ದ್ವಿಚಕ್ರವಾಹನದಲ್ಲಿ ತೆರಳುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಮೋಟಾರ್ ವಾಹನ ಕಾಯ್ದೆಯ ಕಲಂ 129ರ ಅನ್ಮಯ ಹೆಲ್ಮೆಟ್ ಬಗ್ಗೆ ವಿವರಿಸಿದಂತೆ ಪಾಲನೆ ಮಾಡಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮೋಟಾರು ವಾಹನ ಕಾಯ್ದೆ ಎಲ್ಲರಿಗೂ ಅನ್ವಯಿಸಬೇಕು. ಕೇವಲ ಕೆಳಹಂತದ ಅಧಿಕಾರಿಗಳು, ಸಿಬ್ಬಂದಿಗೆ ಮಾತ್ರವಲ್ಲ, ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ ಗಳಲ್ಲಿ ಸಂಚರಿಸುವಾಗ ಸೀಟ್ ಬೆಲ್ಟ್ ಧರಿಸುವುದಿಲ್ಲ. ಈ ಬಗ್ಗೆಯೂ ಕ್ರಮ ಕೈಗೊಳ್ಳಬೇಕೆಂದು ಹೇಳಲಾಗಿದೆ.


Share this with Friends

Related Post