Mon. Dec 23rd, 2024

ಶೋಭಾ ಕರದ್ಲಾಂಜೆ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

Share this with Friends

ನವದೆಹಲಿ,ಮಾ.20: ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು ನೀಡಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಹಿಂದೆ ತಮಿಳುನಾಡಿನ ಜನರಿದ್ದಾರೆ,ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ ಶೋಭಾ ಕರಂದ್ಲಾಜೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧಿಸಿಲ್ಲ,ಆದ್ದರಿಂದ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಿರುವುದಾಗಿ ಡಿಎಂಕೆ ತಿಳಿಸಿದೆ.

ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು, ಬಾಂಬ್ ಇಡಲು ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಶಂಕಿತ ಬಂದಿದ್ದಾನೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಆದರೆ ಎನ್‌ಐಎ ಇಲ್ಲಿಯವರೆಗೆ ಯಾರನ್ನೂ ಬಂಧಿಸಿದಲ್ಲ ಎಂದು ಡಿಎಂಕೆ ದೂರಿನಲ್ಲಿ ಉಲ್ಲೇಖಿಸಿದೆ.

ಮಂಗಳವಾರ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ತಮಿಳುನಾಡಿನ ಜನರು ಅಲ್ಲಿ ತರಬೇತಿ ಪಡೆದುಕೊಂಡು ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿದ್ದರು.

ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಎಕ್ಸ್‌ನಲ್ಲಿ ಕರಂದ್ಲಾಜೆ ಕ್ಷಮೆ ಕೇಳಿದ್ದರು. ನನ್ನ ತಮಿಳು ಸಹೋದರ ಸಹೋದರಿಯರಿಗೆ ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ ಎಂದೂ ತಿಳಿಸಿದ್ದರು.

ಆದರೂ ಡಿಎಂಕೆ ಕೇಂದ್ರ ಚುನಾವಣಾ ಆಯೋಗಕ್ಕೆ ಶೋಭಾ ವಿರುದ್ಧ ದೂರು ನೀಡಿದೆ.


Share this with Friends

Related Post