Mon. Dec 23rd, 2024

ಮೋದಿ 3ನೇ ಬಾರಿ ಪ್ರಧಾನಿಯಾಗಲು ಶ್ರಮಿಸೋಣ: ರೂಪ ಅಯ್ಯರ್ ಕರೆ

Share this with Friends

ಮೈಸೂರು, ಮಾ.20: ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗಲು ನಾವೆಲ್ಲರೂ ಒಂದಾಗಿ ಶ್ರಮಿಸೋಣ ಎಂದು ಬಿಜೆಪಿ ಕಲೆ-ಸಂಸ್ಕೃತಿ ಪ್ರಕೋಷ್ಠ ರಾಜ್ಯ ಸಂಚಾಲಕಿ ರೂಪ ಅಯ್ಯರ್ ಕರೆ ನೀಡಿದರು.

ಬಿಜೆಪಿ ಚಾಮುಂಡೇಶ್ವರಿ ನಗರ ಮಂಡಲ ಶಾರದಾದೇವಿನಗರದಲ್ಲಿಂದು ಏರ್ಪಡಿಸಿದ್ದ
ವಿಕಸಿತ ಭಾರತ ಸಂಕಲ್ಪ ಪತ್ರ ಸಲಹಾ ಸಂಗ್ರಹ ಅಭಿಯಾನದ ವೇಳೆ ಅವರು ಮಾತನಾಡಿದರು.

ಲೋಕಸಭಾ ಚುನಾವಣೆ ಗೆಲ್ಲುವ ಗುರಿ ನಮ್ಮೆಲ್ಲರ ಮುಂದಿದೆ, ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಮಾಹಿತಿಯನ್ನು ಮನೆ ಮನೆಗೆ ತೆರಳಿ ಜನರಿಗೆ ತಲುಪಿಸುವ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಸ್ಥಳೀಯ ಮಹಿಳೆಯರು ಹಾಗೂ ಮುಖಂಡರು ಭಾಗವಹಿಸಿ ಅಭಿಪ್ರಾಯ ಪತ್ರ ನೀಡಿದರು.

ಚಾಮುಂಡೇಶ್ವರಿ ನಗರ ಮಂಡಲದ ಅಧ್ಯಕ್ಷ ರಾಕೇಶ್ ಭಟ್, ಉಪಾಧ್ಯಕ್ಷರಾದ ಹೆಚ್.ಜಿ ರಾಜಮಣಿ, ಹಿರಿಯಣ್ಣ, ಲಲಿತಾ, ಕಾರ್ಯದರ್ಶಿಗಳಾದ ವಿನುತಾ, ತುಳಸಿ, ಮಹಿಳಾ ಅಧ್ಯಕ್ಷೆ ಲಕ್ಷ್ಮೀ ಜಯಶಂಕರ್, ರವಿ ಅರಸ್, ಹೇಮಲತಾ, ಅನಿತಾ, ಸುಮಾ ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು.


Share this with Friends

Related Post