Wed. Dec 25th, 2024

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್ ಬಚ್ಚೇಗೌಡ ರಾಜೀನಾಮೆ

B.-N.-Bache-Gowda
Share this with Friends

ಚಿಕ್ಕಬಳ್ಳಾಪುರ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ. ‘ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ.

ಚುನಾವಣಾ ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡದಿರಲು ಬಚ್ಚೇಗೌಡ ನಿರ್ಧರಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್‍ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು. ಬಚ್ಚೇಗೌಡ ಅವರಿಗೆ 7,45,912 ಮತಗಳು ಬಿದ್ದರೆ ಮೊಯ್ಲಿ ಅವರಿಗೆ 5,63,802 ಮತಗಳು ಬಂದಿದ್ದವು.


Share this with Friends

Related Post