Mon. Dec 23rd, 2024

ಬಿಜೆಪಿ ತೊರೆಯುವುದಿಲ್ಲ:ಸದಾನಂದಗೌಡ ಸ್ಪಷ್ಟನೆ

Share this with Friends

ಬೆಂಗಳೂರು,ಮಾ.21: ನಾನು ಬಿಜೆಪಿ ತೊರೆಯುವುದಿಲ್ಲ,ಪಕ್ಷದಲ್ಲೇ ಇದ್ದು ಶುದ್ದೀಕರಣದ ಕಡೆಗೆ ಗಮನ ನೀಡುತ್ತೇನೆ ಎಂದು ಸಂಸದ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಡಿವಿಎಸ್‌ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಅವರು‌ ತಾವು ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಆಹ್ವಾನ ಬಂದಿದ್ದು ನಿಜ,ಆದರೆ ನಾನು ಕಾಂಗ್ರೆಸ್‌ ಸೇರುವುದಿಲ್ಲ ಬಿಜೆಪಿಯಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಟಿಕೆಟ್‌ ಕೈತಪ್ಪಿದ್ದರಿಂದ ಬೇಸರವಾಗಿದೆಯಾ ಎಂಬ ಪ್ರಶ್ನೆಗೆ, ಬೇಸರವಾಗಿದೆ, ನನ್ನನ್ನು ಅವಮಾನಿಸಿದವರು ಮುಂದೆ ಪಶ್ಚಾತ್ತಾಪ ಅನುಭವಿಸುತ್ತಾರೆ. ಸಹಿಸಿಕೊಳ್ಳುವವರಿಗೆ ತಾಳ್ಮೆ ಇದ್ದರೆ, ದುಃಖ ಕೊಟ್ಟವರು ಇದ್ದೂ ಸತ್ತಂತೆ ಎಂದು ಎಂದು ಹೇಳಿದರು.

ಕರ್ನಾಟಕದಲ್ಲಿ ಮೋದಿ ಪರ ವಾತಾವರಣ ಸೃಷ್ಟಿಯಾಗಬೇಕು ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಇದಕ್ಕಾಗಿ ಬಿಜೆಪಿ ಜನಪರವಾದ ಪಕ್ಷ ಆಗಬೇಕು, ಜನ ಒಪ್ಪಿಕೊಳ್ಳಬಲ್ಲ ಪಕ್ಷ ಆಗಬೇಕು ಎಂದು ಅಭಿಪ್ರಾಯ ಪಟ್ಟರು.

ಮೋದಿ ಅವರು ಹೇಳಿದಂತಹ ಪರಿವಾರವಾದ, ಭ್ರಷ್ಟಾಚಾರವಾದ, ಜಾತಿವಾದ ಕರ್ನಾಟಕದಲ್ಲಿ ಇರಬಾರದು. ಈ ಶುದ್ದೀಕರಣಕ್ಕೆ ವೇಗ ಕೊಡುವಂತದ್ದು ನನ್ನಿಂದ ಮಾತ್ರ ಸಾಧ್ಯ ಎಂದು ಸದಾನಂದಗೌಡ ಹೇಳಿದರು.

ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ, ನನ್ನ ಮಕ್ಕಳಿಗೆ, ನನ್ನ ಕುಟುಂಬದವರಿಗೆ, ನನ್ನ ಸಂಬಂಧಿಕರಿಗೆ, ನನ್ನ ಚೇಲಾಗಳಿಗೆ ಇರುವಂತಹ ಪಕ್ಷ ಬಿಜೆಪಿ ಆಗಬಾರದು ಎಂದು ಹೇಳಿದರು.

ಬಿಜೆಪಿಯೊಳಗೆ ಶುದ್ದೀಕರಣ ಆಗುವ ತನಕ ವಿರಮಿಸುವುದಿಲ್ಲ, ಚುನಾವಣೆ ಬಳಿಕ ಜನರ ಮನಸ್ಸಿನಲ್ಲಿ ಏನಿದೆ ಎಂಬುದು ಗೊತ್ತಾಗಲಿದೆ, ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕರು ಬದಲಾಗುತ್ತಾರೆ ಎಂದು ಈಶ್ವರಪ್ಪ ಹೇಳಿದ್ದಾರೆ ಅದನ್ನು ನೀವು ಅರ್ಥ ಮಾಡಿಕೊಳ್ಳಿ ಎಂದು ಮಾರ್ಮಿಕವಾಗಿ ಸದಾನಂದಗೌಡ ನುಡಿದರು.


Share this with Friends

Related Post