Mon. Dec 23rd, 2024

ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

Share this with Friends

ನವದೆಹಲಿ,ಮಾ.21: ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ, ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ಪಾವತಿಸುವುದಿಲ್ಲ, ಆದರೆ ಕಾಂಗ್ರೆಸ್ ಪಕ್ಷದ 11 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಏಕೆ ಹೀಗೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಜನಸಾಮಾನ್ಯರು ನೀಡಿದ ದೇಣಿಗೆಯನ್ನು ಬಿಜೆಪಿ ಲೂಟಿ ಮಾಡಿದೆ, ನಮ್ಮ ಖಾತೆಗಳನ್ನು ಫ್ರೀಜ್ ಮಾಡಿ ಬಲವಂತವಾಗಿ 115.32 ಕೋಟಿ ಹಿಂಪಡೆದಿದೆ ಎಂದು ದೂರಿದರು.

ಬ್ಯಾಂಕ್ ಖಾತೆ ಫ್ರೀಜ್ ಮಾಡುವ ಸಮಯವನ್ನು ನೋಡಿ, ಕಾಂಗ್ರೆಸ್ 2017-18 ರಲ್ಲಿ 199 ಕೋಟಿ ದೇಣಿಗೆಯನ್ನು ಸ್ವೀಕರಿಸಿದ್ದೇವೆ, ಆದರೆ 7 ವರ್ಷಗಳ ನಂತರ, 13ನೇ ಫೆಬ್ರವರಿ 2024 ರಂದು, 210.25 ಕೋಟಿ ಹೊಣೆಗಾರಿಕೆ ಗುರುತಿಸಲಾಗಿದೆ. ನಮ್ಮ ಬ್ಯಾಂಕ್ ಖಾತೆಗಳನ್ನು ವಾಸ್ತವಿಕವಾಗಿ ಸೀಲ್ ಮಾಡಲಾಗಿದೆ ಮತ್ತು 115.32 ಕೋಟಿಯನ್ನು ಬಲವಂತವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ದೂರಿದರು.

210 ಕೋಟಿ ರೂ.ಗಳನ್ನು ಸೀಲ್ ಮಾಡಿದ್ದು ಮಾತ್ರವಲ್ಲದೆ, ನಮ್ಮ ಪಕ್ಷ ತನ್ನ ಠೇವಣಿ ಮೊತ್ತ 285 ಕೋಟಿ ರೂ.ಗಳನ್ನು ಬಳಸದಂತೆ ತಡೆಹಿಡಿಯಲಾಗಿದೆ. ಇದು ವಾಸ್ತವಿಕವಾಗಿ ವಿರೋಧ ಪಕ್ಷದ ಆರ್ಥಿಕತೆಯನ್ನು ಕುಂಠಿತಗೊಳಿಸುವ ಪ್ರಯತ್ನವಾಗಿದೆ ಎಂದು ಖರ್ಗೆ ಕಿಡಿಕಾರಿದರು.

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ಅನೀವಾರ್ಯವಾಗಿದೆ ಎಂದು ಹೇಳಿದರು

ಸೋನಿಯಾ ಗಾಂಧಿ ಮಾತನಾಡಿ, ಈ ಸಮಸ್ಯೆ ಕೇವಲ ಕಾಂಗ್ರೆಸ್‌ನ ಮೇಲೆ ಪರಿಣಾಮ ಬೀರುವುದಿಲ್ಲ, ಇದು ನಮ್ಮ ಪ್ರಜಾಪ್ರಭುತ್ವದ ಮೇಲೆ ಪರಿಣಾಮ ಬೀರುತ್ತದೆ. ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿ ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.


Share this with Friends

Related Post