Sun. Apr 6th, 2025

ಚನ್ನೈಗೆ ಹೋಗಿ ಹೋರಾಟ ಮಾಡುವಿರಾ:ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

Share this with Friends

ಬೆಂಗಳೂರು, ಮಾ.21: ಮೇಕೆದಾಟು ಯೋಜನೆ ಜಾರಿಗೆ ತಡೆ ಎಂದು ಡಿಎಂಕೆ ಹೇಳಿರುವಯದರಿಂದ ಚನ್ನೈಗೆ ಹೋಗಿ ಹೋರಾಟ ಮಾಡುವಿರಾ ಎಂದು ಬಿಜೆಪಿಯವರು ಪ್ರಶ್ನಿಸಿದ್ದಾರೆ

ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ ಐ‌ ಎನ್ ಡಿ ಎ ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಶಿವಕುಮಾರ್ ಅವರೇ, ಈಗ ನಮ್ಮ ನೀರು, ನಮ್ಮ ಹಕ್ಕು ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ ಎಂದು ಬಿಜೆಪಿ ನಾಯಕರು ಕಾರವಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕರ್ನಾಟಕ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟ್ವೀಟ್ ಮಾಡಿ‌ ಕಿಡಿಕಾರಿದ್ದಾರೆ.


Share this with Friends

Related Post