Mon. Dec 23rd, 2024

ಯಾವುದೇ ಕಾರಣಕ್ಕೆ ಬಿಜೆಪಿ ತೊರೆಯುವುದಿಲ್ಲ : ಡಿ.ವಿ.ಸದಾನಂದ ಗೌಡ

Sadananda Gowda
Share this with Friends

ಬೆಂಗಳೂರು; ಬೆಂಗಳೂರು ಉತ್ತರ ಟಿಕೆಟ್‌ ಕೈತಪ್ಪಿದ್ದರಿಂದ ನನಗೆ ನೋವಾಗಿರುವುದು ನಿಜ. ಆದರೆ ನಾನು ಯಾವುದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ ಸಂಸದ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದರು.ಸಂಜಯ ನಗರ ನಿವಾಸದಲ್ಲಿ ಇಂದು ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಅಲ್ಲದೆ ನಾನು ಪಕ್ಷ ಶುದ್ದೀಕರಣ ಮಾಡುವತ್ತ ಗಮನ ಹರಿಸುತ್ತೇನೆ. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಪಶ್ಚಾತ್ತಾಪ ಅನುಭವಿಸುತ್ತಾರೆ ಎಂದರು.

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾದ ವಾತಾವರಣ ಸೃಷ್ಟಿಯಾಗಬೇಕು. ಅವರು ಪರಿವರ್ತನೆಯ ಹರಿಕಾರ. ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು. ಇದಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಜನರ ಪರವಾದ ಹಾಗೂ ಜನರು ಒಪ್ಪಿಕೊಳ್ಳುವ ಪಕ್ಷವಾಗಬೇಕು ಎಂದು ತಿಳಿಸಿದರು.

ಪಕ್ಷದ ಜವಾಬ್ದಾರಿ ವಹಿಸಿದವರು ಸ್ವಾರ್ಥಿಗಳಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕುಟುಂಬ, ಮಕ್ಕಳು, ಜಾತಿ, ತನ್ನವರಿಗೆ ಸೀಮಿತ ಮಾಡಿದ್ದಾರೆ. ಬಿಜೆಪಿ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯುವುದಿಲ್ಲ. ಬಿಜೆಪಿ ಶುದ್ದೀಕರಣ ಆಗುವವರೆಗೆ ನಾನು ವಿರಮಿಸುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಶುದ್ದೀಕರಣ ಕಾರ್ಯಕ್ಕೆ ವೇಗ ಕೊಡಲಾಗುವುದು ಎಂದರು. ಶೋಭಾ ಕರಂದ್ಲಾಜೆ ಅವರಿಗೆ ಬೆಂಬಲ ಕೊಡುತ್ತೀರಾ? ಎಂಬ ಪ್ರಶ್ನೆಗೆ, ಶೋಭಾ ಕರಂದ್ಲಾಜೆ ಪರವಾಗಿ ನಾನು ಈಗಾಗಲೇ ಪ್ರಚಾರ ಮಾಡಿದ್ದೇನೆ. ಅವರಿಗೆ ಬೆಂಬಲ ಕೊಡದೆ ಇರುವ ಪ್ರಶ್ನೆ ಇಲ್ಲಿ ಉದ್ಭವವೇ ಆಗಲ್ಲ ಎಂದು ತಿಳಿಸಿದರು.


Share this with Friends

Related Post