ಬೆಂಗಳೂರು,ಮಾ.22- ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪದಲ್ಲಿ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಿಗ್‍ಬಾಸ್ ಸ್ರ್ಪ ಸೋನುಗೌಡ (27) ಅವರನ್ನು ಬಂಧಿಸಿದ್ದಾರೆ.ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ನಿನ್ನೆ ರಾತ್ರಿ ದೂರು ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಇಂದು ಬಂಧನ ಮಾಡಿದ್ದಾರೆ. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆಯುತ್ತಿದ್ದು, ಮಗುವನ್ನು ದತ್ತು ಪಡೆದಿರುವುದರ ಬಗ್ಗೆ ಮಾಹಿತಿ ಕೇಳಿದ್ದಾರೆ.
ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿರುವ ಸೋನು ಶ್ರೀನಿವಾಸ್ ಗೌಡ ಪೊಲೀಸ್ ಠಾಣೆಯಲ್ಲಿ ಗೋಳಾಡುತ್ತಿದ್ದಾರೆ. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದಾರೆ.
ನಾನು ಮಗು ಕರೆದುಕೊಂಡು ಬಂದು 15 ದಿನ ಆಗಿದೆ. ಹಾಗೆ ಕರೆದುಕೊಂಡು ಬಂದಿರುವುದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಗೊತ್ತಿದ್ದರೆ, ನಾನು ಪ್ರೊಸಿಜರ್ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
ತಮಗೆ ಇಷ್ಟಬಂದಂತೆ ಯಾವುದೇ ಮಗುವನ್ನು ದತ್ತು ಪಡೆಯುವುದು ಕಾನೂನು ಬಾಹಿರ. ಪೋಷಕರಿಂದ ನೇರವಾಗಿ ದತ್ತು ಪಡೆಯಲು ಆಗಲ್ಲ. ಒಂದು ವೇಳೆ ಪಡೆದರೆ ಅದು ಕಾನೂನು ಬಾಹಿರವಾಗುತ್ತದೆ. ಪೋಷಕರೂ ಕೂಡ ಮಗು ಕೊಡೋಕೆ ಆಗಲ್ಲ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಪ್ರತಿಕ್ರಿಯಿಸಿದ್ದಾರೆ.
.