Tue. Dec 24th, 2024

ನದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ ವ್ಯಕ್ತಿ ಶವ ಪತ್ತೆ:ಕೊಲೆ ಶಂಕೆ

Share this with Friends

ಮೈಸೂರು,ಮಾ. 22: ನದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು ಕೊಲೆ ಶಂಕೆ‌ ವ್ಯಕ್ತವಾಗಿದೆ.

ಜಿಲ್ಲೆಯ ನಂಜನಗೂಡಿನ ಕಪಿಲಾ ನದಿಯಲ್ಲಿ
ಸುಮಾರು 40 ರಿಂದ 45 ವರ್ಷ ವಯಸ್ಸಿನ ಅಪರಿಚಿತ ಪುರುಷನ ದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ‌ ಯಾರೊ‌ ಎಸೆದು ಹೋಗಿದ್ದಾರೆ.

ವ್ಯಕ್ತಿಯನ್ನು ಬೇರೆ ಎಲ್ಲೋ ಕೊಲೆ ಮಾಡಿ ನದಿಯಲ್ಲಿ ಎಸೆದು ಹೋಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯನ್ನು ಕೊಲೆಗೈದು, ಮೊದಲು ಬೆಡ್ ಶೀಟ್ ನಲ್ಲಿ ಸುತ್ತಿ ನಂತರ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಕೆಳಗಡೆ ಎಸೆದು ಹೋಗಿದ್ದಾರೆ,ಮೃತನ ಕೈಯಲ್ಲಿ ರೇಖಾ ಎಂಬ ಹಚ್ಚೆ ಗುರುತು ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಎಸ್ ಪಿ ನಂದಿನಿ, ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಶವವನ್ನು ಮಾರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.


Share this with Friends

Related Post