Wed. Dec 25th, 2024

ಚುನಾವಣೆ ಅಕ್ರಮ ತಡೆಯಲು ಚೆಕ್ ಪೋಸ್ಟ್ ಸ್ಥಾಪನೆ:ಎಸ್ಪಿ ಪರಿಶೀಲನೆ

Share this with Friends

ಮೈಸೂರು, ಮಾ. 22- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆಗಾಗಿ ಮೈಸೂರಿನಾದ್ಯಾಂತ 18 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ.

ಚುನಾವಣೆಗೆ ಸಂಬಂಧಿಸಿದ ಅಕ್ರಮ ತಡೆಯಲು ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರ ನಿರ್ದೇಶನದಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಅವರ ಮಾರ್ಗದರ್ಶನದಲ್ಲಿ ಚೆಕ್ ಪೋಸ್ಟ್ ಗಳನ್ನು ಈ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.

ಮೈಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು ದಿನದ 24 ಗಂಟೆಯೂ ವಾಹನಗಳ ತಪಾಸನೆ ಕಾರ್ಯವನ್ನು ನಡೆಯುತ್ತಿದೆ.

ಇದೇ‌ ವೇಳೆ ಕಡಕೋಳ ಮತ್ತು ತಾಂಡವಪುರ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಶೀಲಿಸಿದರು.

ವಾಹನ ತಪಾಸಣೆಯನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸಲಹೆ ನೀಡಿದರು.


Share this with Friends

Related Post