Mon. Dec 23rd, 2024

ನಾಳೆಯಿಂದ SSLC ಪರೀಕ್ಷೆ ಆರಂಭ

SSLC Exam
Share this with Friends

ಬೆಂಗಳೂರು, ಮಾ.23: ಮಾರ್ಚ್​​ 25ರಿಂದ ಏಪ್ರಿಲ್​​ 6ರ ವರೆಗೆ ನಡೆಯಲಿರುವ 2023-24 ಸಾಲಿನ ಎಸ್​​ಎಸ್​​ಎಲ್​ಸಿ ಪರೀಕ್ಷೆ ನಡೆಯಲಿದ್ದು ರಾಜ್ಯಾದ್ಯಂತ ಒಟ್ಟು 4,41,910 ಬಾಲಕರಾದರೆ, 4,28,058 ಬಾಲಕಿಯರು ಸೇರಿ 8,69,968 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 2750 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲು ಸಜ್ಜು ಮಾಡಿಕೊಳ್ಳಲಾಗಿದೆ.

ಎಸ್ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ, ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ.

ಪರೀಕ್ಷಾ ವೇಳಾಪಟ್ಟಿ
25-03-2024: ಪ್ರಥಮ ಭಾಷೆ ಪರೀಕ್ಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ + ಇಂಗ್ಲಿಷ್ NCERT, ಸಂಸ್ಕೃತ)
27-03-2024: ಸಮಾಜ ವಿಜ್ಞಾನ (ಕೋರ್‌ ಸಬ್ಜೆಕ್ಟ್‌)
30-03-2024: ವಿಜ್ಞಾನ, ರಾಜ್ಯಶಾಸ್ತ್ರ
02-04-2024: ಗಣಿತ, ಸಮಾಜ ಶಾಸ್ತ್ರ
03-04-2024: ಅರ್ಥಶಾಸ್ತ್ರ
04-04-2024: ತೃತೀಯ ಭಾಷೆ ಪರೀಕ್ಷೆ (ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು).
6-04-2024- ದ್ವೀತಿಯ ಭಾಷೆ( ಇಂಗ್ಲೀಷ್, ಕನ್ನಡ).


Share this with Friends

Related Post