Mon. Dec 23rd, 2024

ಬಿಜೆಪಿಯವರಂತೆ ಸುಳ್ಳು ಹೇಳಲ್ಲ; ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಭರವಸೆ

Share this with Friends

ಬೆಂಗಳೂರು ಮಾ 23: ನಾವು ಬಿಜೆಪಿಯವರಂತೆ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ, ಸುಳ್ಳು ಹೇಳಲ್ಲ, ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಸಿಎಂ ಮಾತನಾಡಿದರು.

ಅಚ್ಛೆ ದಿನ್ ಬಂತಾ,ರೈತರ ಆದಾಯ ದುಪ್ಪಟ್ಟು ಮಾಡಿದಾರಾ, ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡಿದ್ದಾರಾ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದೌರು ಸೃಷ್ಟಿಸಿದ್ರಾ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಸುರಿಮಳೆ ಸುರಿಸಿ ವಾಗ್ದಾಳಿ ನಡೆಸಿದರು.

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ಟೀಕಿಸಿದರು.

ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ರೂಪಿಸಿ ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ತೋರಿಸಿ ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರ ವಾಪಾಸ್ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ,ಇದು ಅನ್ಯಾಯ ಎಂದು ಸಿದ್ದ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಸೂರಜ್ ಹೆಗ್ಡೆ, ಮೆಹರೋಜ್ ಖಾನ್, ಬಿಬಿಎಂಪಿ ವ್ಯಾಪ್ತಿಯ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.


Share this with Friends

Related Post