Tue. Dec 24th, 2024

ವಿಕಸಿತ ಭಾರತ ನಿರ್ಮಾಣಕ್ಕಾಗಿ ಶ್ರಮಿಸೋಣ-ವಿಜಯೇಂದ್ರ

Share this with Friends

ಬೆಂಗಳೂರು,ಮಾ.23: ಈ ಲೋಕಸಭಾ ಚುನಾವಣೆಯು ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆಯಾಗಿದೆ ಎಂದು ‌ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ರಾಜ್ಯ ಚುನಾವಣಾ ಸಮಿತಿಯು ಜವಾಬ್ದಾರಿಯುತ ಸ್ಥಾನ ನಿರ್ವಹಿಸಲಿದ್ದು, ಅತ್ಯಂತ ಕ್ರಿಯಾಶೀಲ ನಿರ್ವಹಣೆಯ ಮೂಲಕ ಯಶಸ್ವಿಯಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ತಿಳಿಸಿದರು.

ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ, ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಕೇಶವ ಪ್ರಸಾದ್, ಪಕ್ಷದ ಪದಾಧಿಕಾರಿಗಳು ಮುಖಂಡರು ಹಾಗೂ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು.


Share this with Friends

Related Post