ಬೆಂಗಳೂರು: ರಾಜ್ಯದ ವಿವಿಧ ನಿಗಮ-ಮಂಡಳಿಗಳಿಗೆ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಿಸಿದ ಬೆನ್ನಲ್ಲೇ, ಇದೀಗ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ.
ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಅಧಿಕೃತ ಪ್ರಕಟಣೆಯಲ್ಲಿ ಒಟ್ಟು 18 ಪ್ರಮುಖ ನಾಯಕರಿಗೆ ವಿವಿಧ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ನಾಯಕರಿಗೆ ಪ್ರಮುಖ ಹುದ್ದೆಗಳನ್ನು ನೀಡುವ ಮೂಲಕ ಅಸಮಾಧಾನ ಶಮನಗೊಳಿಸಲು ಮತ್ತು ರಾಜ್ಯದ ಎಲ್ಲಾ ಭಾಗಗಳಿಗೆ ಪ್ರಾದೇಶಿಕ ಪ್ರಾತಿನಿಧ್ಯ ನೀಡಲು ಹೈಕಮಾಂಡ್ ಈ ಕ್ರಮ ಕೈಗೊಂಡಿದೆ.
ಪ್ರಮುಖ ಹುದ್ದೆಗಳು ಹಾಗೂ ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ
ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಿರುವ 18 ಪ್ರಮುಖ ನಾಯಕರ ಪಟ್ಟಿಯಲ್ಲಿ ತನ್ವೀರ್ ಸೇಠ್ (ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ),ಬೇಳೂರು ಗೋಪಾಲಕೃಷ್ಣ (ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ),ಮಂಜುನಾಥ ಭಂಡಾರಿ (ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕ),ಬಿ.ಶಿವಣ್ಣ (ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ),ಕೆ.ಷಡಕ್ಷರಿ (ಕರ್ನಾಟಕ ರಾಜ್ಯ ಖನಿಜ ನಿಗಮ), ಎ.ಆರ್. ಕೃಷ್ಣಮೂರ್ತಿ (ಬಿಎಂಟಿಸಿ), ಜಿ.ಎಚ್. ಶ್ರೀನಿವಾಸ್ (ಪ್ರವಾಸೋದ್ಯಮ ಅಭಿವೃದ್ಧಿ ನಿಗಮ),ಬಸನಗೌಡ ದದ್ದಲ್ (ಕೆಕೆಆರ್‌ಡಿಬಿ) ಸೇರಿದಂತೆ ಪ್ರಮುಖರು ಸ್ಥಾನ ಪಡೆದಿದ್ದಾರೆ.

ನೇಮಕಗೊಂಡವರ ಪಟ್ಟಿ ಹೀಗಿದೆ:
1. ಬಿ. ಶಿವಣ್ಣ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರು.
2. ಕೆ. ಷಡಕ್ಷರಿ – ಕರ್ನಾಟಕ ರಾಜ್ಯ ಖನಿಜ ನಿಗಮ (KSMCL) ಅಧ್ಯಕ್ಷರು.
3. ಪಿ.ಎಂ. ಅಶೋಕ್ – ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷರು.
4. ಎ.ಆರ್. ಕೃಷ್ಣಮೂರ್ತಿ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷರು.
5. ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷರು.
6. ಡಿ.ಜಿ. ಶಾಂತನ ಗೌಡ – ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (BSWML) ಅಧ್ಯಕ್ಷರು.
7. ಜಿ.ಎಚ್. ಶ್ರೀನಿವಾಸ್ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷರು.
8. ಮಹಾಂತೇಶ್ ಕೌಜಲಗಿ – ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರು.
9. ಎಸ್.ಎನ್. ಸುಬ್ಬಾರೆಡ್ಡಿ – ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (MSIL) ಅಧ್ಯಕ್ಷರು.
10. ಬೇಲೂರು ಗೋಪಾಲಕೃಷ್ಣ – ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕರು.
11. ತನ್ವೀರ್ ಸೇಠ್ – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ.
12. ಎನ್.ಎಚ್. ಕೋನರೆಡ್ಡಿ – ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರು.
13. ಬಸನಗೌಡ ದದ್ದಲ್ – ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷರು.
14. ಮಂಜುನಾಥ್ ಭಂಡಾರಿ – ವಿಧಾನ ಪರಿಷತ್ತಿನ ಮುಖ್ಯ ಸಚೇತಕರು.
15. ಅಲ್ಲಂಪ್ರಭು ಪಾಟೀಲ್ – ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) ಅಧ್ಯಕ್ಷರು.
16. ಶ್ಯಾಮ್ ನಟೇಕರ್ – ಕರ್ನಾಟಕ ಸಾಂಬಾರ ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷರು.
17. ಎಚ್.ಸಿ. ಲಲಿತ್ ರಾಘವ್ – ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ (KAVIKA) ಅಧ್ಯಕ್ಷರು.
18. ಸುಭಾಷ್ ರಾಥೋಡ್ – ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರು.

