Mon. Dec 23rd, 2024

ಲೋಕಸಭಾ ಚುನಾವಣೆ: ರಾಜ್ಯದಲ್ಲಿ 20 ಸ್ಥಾನ ಗೆಲ್ಲುತ್ತೇವೆ-ಸಿದ್ದರಾಮಯ್ಯ ವಿಶ್ವಾಸ

Share this with Friends

ಮೈಸೂರು, ಮಾ. 24: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಜಯಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ
ನಾವು ಬಿಜೆಪಿಯವರಂತೆ 28‌ ಸ್ಥಾನಗಳನ್ನು ಗೆಲ್ಲುತ್ತೇವೆಂದು ಸುಳ್ಳು ಹೇಳುವುದಿಲ್ಲ ಎಂದು ತಿಳಿಸಿದರು.

ಬಿಜೆಪಿ ಅವರು 28 ಕ್ಷೇತ್ರಗಳಲ್ಲಿಯೂ ನಾವೇ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ ಅದು ಸಾಧ್ಯನಾ ನೀವೇ ಹೇಳಿ ಎಂದು ಮಾಧ್ಯಮದವರನೇ ಪ್ರಸ್ನಿಸಿದ ಸಿದ್ದರಾಮಯ್ಯ, ನಾವು ಇಪ್ಪತ್ತು ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ ಎಂದು ತಿಳಿಸಿದರು

ನಾಳೆ ಅಥವಾ ನಾಡಿದ್ದು ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಆಗಲಿದೆ‌ ನಾವು ಹಂತ,ಹಂತವಾಗಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲಿ ಕಗ್ಗಂಟಾಗಿದೆಯಾ ಎಂಬ ಪ್ರಶ್ನೆಗೆ ಕಗ್ಗಂಟೇನೂ ಇಲ್ಲ ಒಟ್ಟಿಗೆ 28 ಕ್ಷೇತ್ರಕ್ಕೂ ಹೆಸರನ್ನು ಪ್ರಕಟಿಸುವುದು ಬೇಡ ಎಂದು ನಾಲ್ಕು ಕ್ಷೇತ್ರಗಳನ್ನು ಉಳಿಸಿಕೊಂಡಿದ್ದೇವೆ ಅದನ್ನು ನಾಳೆ ಅಥವಾ ನಾಳಿದ್ದು ಪ್ರಕಟಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ನಾವು ರಾಜ್ಯದಲ್ಲಿ ನೀಡಲಾಗಿರುವ ಗ್ಯಾರಂಟಿ ಆಧಾರದ ಮೇಲೆ ಮತಯಾಚನೆ ಮಾಡುತ್ತೇವೆ ಹಾಗಾಗಿ ಜನ ನಮ್ಮನ್ನು ಆಶೀರ್ವದಿಸಲಿದ್ದಾರೆ ಎಂದು ಸಿದ್ದರಾಮಯ್ಯ‌ ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಸಚಿವರಾದ ಡಾಕ್ಟರ್ ಎಚ್ ಸಿ ಮಹದೇವಪ್ಪ, ಕೆ ವೆಂಕಟೇಶ್ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು


Share this with Friends

Related Post