Mon. Dec 23rd, 2024

ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗ ಚುರುಕಾಗಿ ಕಾರ್ಯ ಮಾಡಲಿ:ವಿಜಯೇಂದ್ರ

Share this with Friends

ಬೆಂಗಳೂರು,ಮಾ.25: ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಬೆಂಗಳೂರಿನಲ್ಲಿಂದು ಹಮ್ಮಿಕೊಳ್ಳಲಾಯಿತು.

ಸೋಮವಾರ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಬಿಜೆಪಿ ರಾಜ್ಯಾಧ್ಯಕ್ಷಮತ್ತು ಶಾಸಕರಾದ ಬಿ.ವೈ. ವಿಜಯೇಂದ್ರ, ರಾಷ್ಟ್ರೀಯ ವಕ್ತಾರರಾದ ಶೆಹಜಾದ್ ಪೂನಾವಾಲ ಉದ್ಘಾಟಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ಸಿ.ಟಿ.ರವಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಮತ್ತಿತರರು ಪಾಲ್ಗೊಂಡಿದ್ದರು.

ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ ಹಾಗಾಗಿ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗಗಳು ಹೆಚ್ಚು ಸಕ್ರೀಯವಾಗಿ ಕಾರ್ಯ ನಿರ್ವಹಿಸಬೇಕು, ಜನರ ಮನ ಮುಟ್ಟಲು ಚುರುಕಾಗಿ‌ ಕೆಲಸ ಮಾಡಬೇಕೆಂದು ಈ‌ ವೇಳೆ ವಿಜಯೇಂದ್ರ ಸಲಹೆ ನೀಡಿದರು.


Share this with Friends

Related Post