Mon. Dec 23rd, 2024

ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಗೋಕರ್ಣದಲ್ಲಿ ವಿಶೇಷ ಪೂಜೆ

DK Shivakumar
Share this with Friends

ಬೆಂಗಳೂರು, ಮಾ.27– ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಪೂಜೆ ನೇರವೇರಿಸಿದರು. ಈ ವೇಳೆ ಅರ್ಚಕರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದರು.

ಗೋಕರ್ಣದಲ್ಲಿನ ಪೂಜೆಯ ವೇಳೆಯಲ್ಲಿನ ಸಂಕಲ್ಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ ಎಂದರು.

ಕೆಲವರು ನನ್ನನ್ನ ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನ ತಪ್ಪಿಸಲು ಸಾಧ್ಯವೇ? ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.


Share this with Friends

Related Post