Fri. Nov 1st, 2024

ಸೋಲಿನ ಭೀತಿಯಲ್ಲಿ ಚುನಾವಣೆಗೆ ಸಚಿವರು ಸ್ಪರ್ಧಿಸುತ್ತಿಲ್ಲ:ವಿಜಯೇಂದ್ರ

Share this with Friends

ಮೈಸೂರು, ಮಾ. 27: ಸೋಲಿನ ಭೀತಿಯಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಚಿವರು ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದರು.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಅವರು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಚಿವರನ್ನ ಕಣಕ್ಕಿಳಿಸಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಯೋಜನೆ, ಆದರೆ, ಪ್ರಧಾನಿ ನರೇಂದ್ರ ಮೋದಿ ಅಲೆಗೆ ಹೆದರಿ ಸಚಿವರು ಸ್ಪರ್ಧಿಸಲು ಮುಂದೆ ಬರುತ್ತಿಲ್ಲ ಎಂದು ಹೇಳಿದರು.

18 ಮಂದಿ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಸಿಎಂ ಹಾಗೂ ಡಿಸಿಎಂ ಮುಂದಾಗಿದ್ದರು ಆದರೆ ಅವರಿಬ್ಬರ ಯೋಜನೆ ಉಲ್ಟಾ ಹೊಡೆದಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎಂಬಂತಾಗಿದೆ,ಕಡಿಮೆ ಅವಧಿಯಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಯಾರ ಪರವಾಗಿಯೂ ಈ ಸರ್ಕಾರ ಇಲ್ಲ ಎಂದು ಜನರೇ ಬೇಸರ ಪಡುತ್ತಿದ್ದಾರೆ.

ಜನಪ್ರಿಯತೆ ಕಳೆದುಕೊಂಡಿರುವ ಕಾಂಗ್ರೆಸ್ ಈಗ ನಮ್ಮ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದರು.


Share this with Friends

Related Post