Mon. Dec 23rd, 2024

ರಂಗೋಲಿಯಲ್ಲೂ ಮತದಾನ ಜಾಗೃತಿ

Share this with Friends

ಮೈಸೂರು,ಮಾ.29: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದಲ್ಲಿ ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದ್ದಾರೆ.

ದೇಬೂರು ಗ್ರಾಮದ ಲಕ್ಷ್ಮೀ ನಾರಾಯಣಸ್ವಾಮಿ ದೇಗುಲದ ಮುಂಭಾಗ ರಸ್ತೆಯಲ್ಲಿ ಗ್ರಾಮದ ಸ್ವ- ಸಹಾಯ ಸಂಘದ ಮಹಿಳೆಯರೊಂದಿಗೆ ಸ್ಥಳೀಯ ಮಹಿಳೆಯರು ರಂಗೋಲಿ ಬಿಡಿಸಿ ಮತದಾನ ಜಾಗೃತಿ ಘೋಷವಾಕ್ಯಗಳನ್ನು ಬರೆದು ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಿದರು.

ಈ ವೇಳೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರು ಮಾತನಾಡಿ, ಪ್ರತಿಯೊಬ್ಬರ ಮತವು ಅತ್ಯಮೂಲ್ಯವಾಗಿದ್ದು, ತಮ್ಮ ಸಂವಿಧಾನದ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು.

ಚುನಾವಣೆ ಸಂಬoಧ ಯಾವುದೇ ದೂರುಗಳಿದ್ದಲ್ಲಿ ಸಿ-ವಿಜಿಲ್ ಆಪ್ ಮೂಲಕ ಸಲ್ಲಿಸುವಂತೆ ತಿಳಿಸಿದರು. ಬಳಿಕ ಅತ್ಯುತ್ತಮವಾಗಿ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ವಿತರಿಸಿದರು.

ಮಹಿಳೆಯರು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಮತದಾನದ ಮಹತ್ವ ಸಾರಿದರು.


Share this with Friends

Related Post