Mon. Dec 23rd, 2024

ಫೆಬ್ರವರಿ 16ರಂದು ರಾಜ್ಯಬಜೆಟ್‌:‌ಯು.ಟಿ.ಖಾದರ್ ಹೇಳಿಕೆ

Share this with Friends

ಬೆಂಗಳೂರು,ಫೆ.6: ಫೆಬ್ರವರಿ 12ರಿಂದ ಬಜೆಟ್‌ ಅಧಿವೇಶನ ಪ್ರಾರಂಭಬಾಗಲಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಫೆಬ್ರವರಿ 12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿದರು.

ಫೆಬ್ರವರಿ 12 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಅಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಸ್ಪೀಕರ್ ‌ತಿಳಿಸಿದರು.

ಕಲಾಪಕ್ಕೆ ಯಾವುದೇ ಶಾಸಕರು ಗೈರಾಗಬಾರದು ಎಂದು ಎಚ್ಚರಿಕೆ ಸಹಾ ನೀಡಿದರು.

12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ನಂತರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆಯಲಿದೆ
ತದನಂತರ ನಿರ್ಣಯ ಅಂಗೀಕಾರವಾಗಲಿದೆ ಎಂದು ತಿಳಿಸಿದರು.

ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು ಎಂದು ಸ್ಪೀಕರ್ ತಿಳಿಸಿದರು.

10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನ ನಿಗದಿಪಡಿಸಲಾಗಿದೆ.

ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳ ಮೇಲೆ ಚರ್ಚೆ ನಡೆಯಲಿದೆ ಎಂದು ಯು.ಟಿ.ಖಾದರ್ ತಿಳಿಸಿದರು.


Share this with Friends

Related Post