ಹುಣಸೂರು,ಮಾ.30: ನನ್ನ ಕ್ಷೇತ್ರದ – ರಾಜ್ಯದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ ಎಂದು ಮೈಸೂರು,ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ತಿಳಿಸಿದರು.
ಹಲವು ವರ್ಷಗಳಿಂದ ನಿರಂತರ ಹೋರಾಟ ಮಾಡಿ ಬಂದ ಸಾಮಾನ್ಯ ವ್ಯಕ್ತಿನಾನು, ನನ್ನ ನಿಷ್ಠಾವಂತ ಹೋರಾಟಕ್ಕೆ ಕಾಂಗ್ರೇಸ್ ಪಕ್ಷ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡಿದೆ ಅದಕ್ಕೆ ಆಬಾರಿಯಾಗಿದ್ದೇನೆ ಎಂದು ತಿಳಿಸಿದರು.
ಹುಣಸೂರಿನಲ್ಲಿ ಇಂದು ನಡೆದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಲಕ್ಷ್ಮಣ್,ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಕ್ಷೇತ್ರದ ಹಾಗೂ ರಾಜ್ಯದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ ಎಂದು ನುಡಿದರು.
ತಮ್ಮೆಲ್ಲರ ಸೇವೆಗಾಗಿ ಸದಾ ಸಿದ್ಧ, ರಾಜ್ಯದ ಯಾವುದೇ ಸಮಸ್ಯೆಯನ್ನು ಕುರಿತು ನೇರವಾಗಿ ಮಾತನಾಡುತ್ತೇನೆ, ತಂಬಾಕು ಬೆಳೆಗಾರರು, ಅಧಿಕೃತ ಮತ್ತು ಅನಧಿಕೃತ ಬೆಳೆಗಾರರ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಜೊತೆಗೆ ಸೇರಿ ಒಬ್ಬ ಸಂಸದ ಮಾಡಬೇಕಾದ ಉತ್ತಮ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ. ಮೈಸೂರು ಮತ್ತು ಕೊಡಗು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಉದ್ಯೋಗ, ಪ್ರವಾಸೋಧ್ಯಮ, ತಂತ್ರಜ್ಞಾನ ಸೃಷ್ಟಿಸಲು ಅವಕಾಶ ಇದೆ. ಆದರೆ ಬಿಜೆಪಿ ಯಾವುದೇ ರೀತಿಯ ಕೆಲಸ ಮಾಡಲಿಲ್ಲ ಎಂದು ಟೀಕಿಸಿದರು.
ಸಚಿವ ಕೆ.ವೆಂಕಟೇಶ್ ಮಾತನಾಡಿ,
ಜನರು ಬಹಳ ಬುದ್ಧಿವಂತರಿದ್ದಾರೆ ಯೋಚಿಸಿ ಮತ ಚಲಾಯಿಸುತ್ತಾರೆ. ಬಿಜೆಪಿಯನ್ನು ಕಿತ್ತೊಗೆಯುವ ಕೆಲಸವನ್ನು ಮಾಡುತ್ತಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠವನ್ನು ಕಲಿಸುತ್ತಾರೆ ದೇಶ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಬೆಂಬಲಿಸಿ ಎಂದು ಕೋರಿದರು.
ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಮಾತನಾಡಿ ಸಂವಿಧಾನದ ರಕ್ಷಣೆ ನಮ್ಮೆಲ್ಲರ ರಕ್ಷಣೆ. ಮಹಿಳೆಯರ, ಹಿಂದುಳಿದವರ, ಕಾರ್ಮಿಕರ, ರೈತರ, ವಿದ್ಯಾರ್ಥಿಗಳ ಪರ ಉತ್ತಮ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದ ಏಕೈಕ ಸರ್ಕಾರ ಅಂದರೆ ಅದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಧಿಕ ಮತಗಳ ಅಂತರದಿಂದ ಲಕ್ಷ್ಮಣ್ ರವರನ್ನು ಗೆಲ್ಲಿಸಿ,ಈ ಕ್ಷೇತ್ರದ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಹೆಚ್.ಪಿ.ಮಂಜುನಾಥ್, ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್,ಜಿಲ್ಲಾಧ್ಯಕ್ಷ ಅರುಣ್ ಕುಮಾರ್,ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಬಿ.ಜೆ ವಿಜಯ ಕುಮಾರ್, ಪ್ರೇಮ್ ಕುಮಾರ್ , ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.