Mon. Dec 23rd, 2024

ದೆಹಲಿ ಸಿಎಂ ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ, ತಿಹಾರ್‌ ಜೈಲಿಗೆ ಸ್ಥಳಾಂತರ

Arvind Kejriwal
Share this with Friends

ನವದೆಹಲಿ.ಎ.1 :  ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋರ್ಟ್‌ 15 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ಗುರುವಾರ ಕೋರ್ಟ್‌ ಅರವಿಂದ ಕೇಜ್ರಿವಾಲ್‌ ಅವರನ್ನು 4 ದಿನ ಇಡಿ ಕಸ್ಟಡಿಗೆ ನೀಡಿತ್ತು. ಸದ್ಯ ಇಡಿ ಕಸ್ಟಡಿಯಲ್ಲಿ ಇರುವ ಕೇಜ್ರಿವಾಲ್‌ ಇನ್ನು ಮುಂದೆ ತಿಹಾರ್‌ ಜೈಲಿಗೆ ಶಿಫ್ಟ್‌ ಆಗಲಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ರೂಸ್ ಅವೆನ್ಯೂ ನ್ಯಾಯಾಲಯ ಯಾವುದೇ ಪರಿಹಾರ ನೀಡಿಲ್ಲ. ಕೇಜ್ರಿವಾಲ್ ಅವರ ‘ಅಸಹಕಾರ ವರ್ತನೆ’ಯನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಹದಿನೈದು ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿತ್ತು. ಸಿಎಂ ಅವರ ಕಸ್ಟಡಿ ಸೋಮವಾರ ಕೊನೆಗೊಂಡಿದ್ದರಿಂದ ಅವರನ್ನು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಏ.15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಇಡಿ, 22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯ ಆರಂಭದಲ್ಲಿ ಮಾರ್ಚ್ 28ವರೆಗೆ ಇಡಿ ಕಸ್ಟಡಿಗೆ ನೀಡಿತ್ತು. ಮಾರ್ಚ್ 28ರಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಡಿ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.


Share this with Friends

Related Post