Fri. Nov 1st, 2024

ಒಕ್ಕಲಿಗ ಸಮುದಾಯದಿಂದ ಕಾಂಗ್ರೆಸ್‌ಗೆ ಬೆಂಬಲ

Share this with Friends

ಮೈಸೂರು,ಏ.3: ಚಾಮರಾಜ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಇಂದಿನ ಸಭೆ ಸಾಕ್ಷಿಯಾಯಿತು ಎಂದು ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಂಚೇಗೌಡನಕೊಪ್ಪಲು ರವಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಚಾಮರಾಜ ಕ್ಷೇತ್ರದಲ್ಲಿ ನಡೆಸಿದ ಭರ್ಜರಿ ಚುನಾವಣಾ ಪ್ರಚಾರದ ಬಳಿಕ ರವಿ ಮಾದ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾಗಿ ಮತದಾರರ ಮೆಚ್ಚುಗೆ ಗಳಿಸಿವೆ. ಬೆಲೆ ಏರಿಕೆ,ನಿರುದ್ಯೋಗ, ಬಡತನದಂತಹ ಇಂದಿನ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಜನರ ಕೈ ಹಿಡಿದು
ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ ಎಂದು ತಿಳಿಸಿದರು.

ಮಹಿಳೆಯರು ಗ್ಯಾರಂಟಿ ಯೋಜನೆಗೆ ತಮ್ಮ ಮತ ಹಾಕಲಿದ್ದು, ಶಾಸಕರಾದ ಹರೀಶ್‌ಗೌಡ ಅವರ ನೇತೃತ್ವದಲ್ಲಿ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್
ಅವರಿಗೆ ಹೆಚ್ಚು ಬಹುಮತ ಸಿಗಲಿದೆ ಎಂದು ತಿಳಿಸಿದರು.

ಈ ಚುನಾವಣೆ ಕೇವಲ ಸಿದ್ದರಾಮಯ್ಯ ಅವರಿಗೆ ಸವಾಲು ಮಾತ್ರವಲ್ಲ. ನಮಗೂ ಸಮಾಲು, ನಾವು ಪ್ರತಿ ಮನೆ ಮನೆಗೂ ತೆರಳಿ ಕಾಂಗ್ರೆಸ್ ಪಕ್ಷದ ಸಾಧನೆಗಳು ಮತ್ತು ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಟ್ಟು ನಮ್ಮ ಅಭ್ಯರ್ಥಿ ಪರವಾಗಿ ಮತ ಯಾಚನೆ ಮಡಿ ಅವರನ್ನು ಖಂಡಿತಾ ಬಹುಮತದಿಂದ ಗೆಲ್ಲಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಮನೆಗೆ ಆಗಮಿಸಿದ್ದು ನನಗೆ ಸಂತೋಷ ನೀಡಿದೆ ಎಂದು ರವಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಗೌಡ, ರವಿಶಂಕರ್, ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.


Share this with Friends

Related Post