Fri. Nov 1st, 2024

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Share this with Friends

ನವದೆಹಲಿ,ಫೆ.7: ರಾಜ್ಯಕ್ಕೆ ತೆರಿಗೆ ಹಣದಲ್ಲಿ ಮೋಸ ಆಗಿದೆ ಎಂದು ಆರೋಪಿಸಿ ಕಾಂಗ್ರೆಸ್, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿತು.

ಈ ವೇಳೆ ಮಾತನಾಡಿದ ಸಿಎಂ, ಈ ಚಳವಳಿ ರಾಜಕೀಯ ಚಳವಳಿ ಅಲ್ಲ,ಇದು ರಾಜಕೀಯೇತರ ಚಳವಳಿ, ಕರ್ನಾಟಕ ಕನ್ನಡಿಗರ ಹಿತ ಕಾಯಲು ಮಾಡುತ್ತಿರುವ ಪ್ರತಿಭಟನೆ ಎಂದು ತಿಳಿಸಿದರು.

ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ, ಈ ಪ್ರತಿಭಟನೆ ಯಾವುದೇ ಪಕ್ಷದ ವಿರುದ್ಧ ಅಲ್ಲ ಎಂದು ಮತ್ತೆ,ಮತ್ತೆ ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಡಿಸಿಎಂ ಡಿ.ಕೆ ಶಿವಕುಮಾರ್‌ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ಮಾತು ಕೊಟ್ಟಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿದರು.

26 ಬಿಜೆಪಿ ಸಂಸದರು 26 ಎಂಪಿಗಳು ಬಾಯಿ ಬಿಟ್ಟಿಲ್ಲ, ಇಂದು ಮಾನ, ಮರ್ಯಾದೆ, ನಾಚಿಕೆ ಬಿಟ್ಟು ಬೆಂಗಳೂರಿನ ಗಾಂಧಿ ಪ್ರತಿಮೆ ಹತ್ತಿರ ಹೋಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕರ್ನಾಟಕಕ್ಕೆ ಇಷ್ಟು ಮೋಸ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ,ನಾವು ಕೇಳಿದ್ದು ಕೇಂದ್ರ ಸರ್ಕಾರಕ್ಕೆ ಕೇಳಿಸಲಿಲ್ಲ,ಹಾಗಾಗಿ ಇಲ್ಲಿ ಕೂಗಿ ಹೇಳಲು ಬಂದಿದ್ದೇವೆ ಎಂದು ಡಿಸಿಎಂ ತಿಳಿಸಿದರು.

ಪ್ರತಿಭಟನೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಬಹುತೇಕ ಸಚಿವರು,ಶಾಸಕರು‌ ಮತ್ತಿತರರು ಪಾಲ್ಗೊಂಡಿದ್ದರು.


Share this with Friends

Related Post