Mon. Dec 23rd, 2024

ಕಡ್ಡಾಯ, ನೈತಿಕ ಮತದಾನ ಬೆಂಬಲಿಸಿ : ಜಿ.ಪಂ ಸಿ.ಇ.ಒ ಆನಂದ್ ಪ್ರಕಾಶ್ ಮೀನ

Share this with Friends

ಚಾಮರಾಜನಗರ, ಏ.4: ಲೋಕಸಭಾ ಚುನಾವಣೆಯಲ್ಲಿ ನೈತಿಕ ಮತದಾನ ಬೆಂಬಲಿಸಿ ಎಂದು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಆನಂದ್ ಪ್ರಕಾಶ್ ಮೀನ ತಿಳಿಸಿದರು.

ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ಜಿಲ್ಲೆಯಲ್ಲಿಯೂ ನಡೆಯಲಿದ್ದು, ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಎಂದು ಮನವಿ ಮಾಡಿದರು.

ಗುಂಡ್ಲುಪೇಟೆ ತಾಲೂಕಿನ ಕಣ್ಣೇಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿಮವದ್ ವೇಣುಗೋಪಾಲಸ್ವಾಮಿ ದೇವಸ್ಥಾನದ ಮುಂಭಾಗ ಇಂದು ತಾಲ್ಲೂಕ ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ತಾಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನದ ಜಾಗೃತಿ ಕಾರ್ಯಕ್ರಮದ ವೇಳೆ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಯಾವುದೇ ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತ ಹಾಗೂ ನಿರ್ಭಯವಾಗಿ ಮತಚಲಾಯಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ ದೇಶವನ್ನು ನಡೆಸಲು ನಿಮ್ಮ ಒಂದು ಮತ ಬಹಳ ಅಮೂಲ್ಯವಾದದ್ದು, ಹಣದ ಆಸೆಗೆ ಮತ ಮಾರಿಕೊಳ್ಳಬೇಡಿ, ನಿಮಗೆ ಮೂಲಸೌಕರ್ಯ ಒದಗಿಸಲು ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಿ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ ಅವರು ದೇವಸ್ಥಾನ ಆವರಣದಲ್ಲಿ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದರು.

ತಹಶೀಲ್ದಾರ್ ಮಂಜುನಾಥ, ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಹುಲಿ ಯೋಜನೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, ಬಂಡೀಪುರ ಹುಲಿಯೋಜನೆ ನಿರ್ದೇಶಕರಾದ ಪ್ರಭಾಕರನ್, ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪಿಡಿಒ, ಕಾರ್ಯದರ್ಶಿಗಳು ಹಾಜರಿದ್ದರು.


Share this with Friends

Related Post