Mon. Dec 23rd, 2024

ಲೋಕಾಯುಕ್ತ ಬಲೆಗೆ ಬಿದ್ದ ಪ್ರಥಮ ದರ್ಜೆ ಸಹಾಯಕ

Share this with Friends

ಮೈಸೂರು,ಏ.5: 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕ ಮೈಸೂರಿನಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೈಸೂರಿನ ಮೇಟಗಳ್ಳಿಯಲ್ಲಿರುವ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಿಬಿರಾರ್ಥಿಗಳಿಗೆ ಊಟೋಪಚಾರದ ಬಿಲ್ ಪಾವತಿ ಸಂಬಂಧ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಮಹೇಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ತರಬೇತಿ ಕೇಂದ್ರದ ಶಿಬಿರಾರ್ಥಿಗಳಿಗೆ ಊಟೋಪಚಾರ ನೀಡಿದ್ದಕ್ಕೆ ತರಬೇತಿ ಕೇಂದ್ರದಿಂದ 5.16 ಲಕ್ಷ ರೂಪಾಯಿ ಬಿಲ್ ಬಿಡುಗಡೆಯಾಗಿತ್ತು. ಈ ಬಿಲ್ ಪಾವತಿ ಮಾಡಲು ಕ್ಯಾಟರಿಂಗ್ ಮಾಲೀಕ ಶಿವನಾಗ ಎಂಬುವರ ಬಳಿ ಮಹೇಶ್ 80 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಈ ಬಗ್ಗೆ ಕ್ಯಾಟರಿಂಗ್ ಮಾಲೀಕ ಶಿವನಾಗ ಅವರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು‌. ಶಿವನಾಗ ನೀಡಿದ ದೂರಿ‌ನ‌ ಮೇರೆಗೆ ಲೋಕಾಯುಕ್ತ ಎಸ್ ಪಿ ಸಜಿತ್, ಡಿ ವೈ ಎಸ್ ಪಿ ಕೃಷ್ಣಯ್ಯ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್‌ ಪೆಕ್ಟರ್ ಗಳಾದ ಜಯರತ್ನ, ಉಮೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಹೇಶ್ ನನ್ನು ಹಣದ ಸಮೇತ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.


Share this with Friends

Related Post