Mon. Dec 23rd, 2024

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ:11ಮಂದಿ ದುರ್ಮರಣ

Share this with Friends

ಮಧ್ಯಪ್ರದೇಶ,ಫೆ.7: ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ 11 ಮಂದಿ ದಾರುಣವಾಗಿ ಮೃತಪಟ್ಟು, ನೂರು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಘರ್ ಗ್ರಾಮದಲ್ಲಿ ನಡೆದಿದೆ.

ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಬಳಿಯ 50 ಕ್ಕೂ ಹೆಚ್ಚು ಮನೆಗಳನ್ನು ಗಾಡ ಹೊಗೆ ಆವರಿಸಿತ್ತು.

ಕಾರ್ಖಾನೆಯೊಳಗೆ ದೊಡ್ಡ ಪ್ರಮಾಣದ ಗನ್ ಪೌಡರ್ ಇತ್ತು. ಇದು ಸ್ಫೋಟಕ್ಕೆ ಕಾರಣವಾಯಿತು ಎಂದು ತಿಳಿದುಬಂದಿದೆ.

ಈ ಘಟನೆಯ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ದುಃಖ ವ್ಯಕ್ತಪಡಿಸಿದ್ದಾರೆ.

ಸ್ಫೋಟಕ್ಕೆ ಕಾರಣರಾದವರನ್ನು ಬಿಡುವುದಿಲ್ಲ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.


Share this with Friends

Related Post