Mon. Dec 23rd, 2024

ಶಿವಮೊಗ್ಗದಲ್ಲಿ ಮೋದಿ ಫೋಟೋಗಾಗಿ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ

K. S. Eshwarappa
Share this with Friends

ಶಿವಮೊಗ್ಗ, ಏ.6: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಕೋರ್ಟ್ ಮೆಟ್ಟಿಲೇರಿದ್ದಾರೆ. ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.

ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಇದೀಗ ಮೋದಿ ಫೋಟೋಗಾಗಿ ಕೋರ್ಟ್​ ಮೊರೆಹೋಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರನ್ನು ಮನವೊಲಿಸುವುದಕ್ಕಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ದೆಹಲಿಗೆ ಬರುವಂತೆ ತಿಳಿಸಿದ್ದರು. ಅದರಂತೆ ದೆಹಲಿಗೆ ತೆರಳಿದ್ದ ಈಶ್ವರಪ್ಪ, ಭೇಟಿಗೆ ಅವಕಾಶ ಸಿಗದೇ ವಾಪಸ್ ಆಗಿದ್ದರು.

ನಂತರ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ನಾಯಕರ ಸಮ್ಮತಿ ಇರಬಹುದು. ಬಹಿರಂಗವಾಗಿ ಅಲ್ಲವಾದರೂ ಒಳಗಿಂದೊಳಗೆ ಅವರಿಗೆ ಮನಸಿರಬಹುದು. ರಾಜ್ಯದಲ್ಲಿ ಅಪ್ಪ ಮಕ್ಕಳ ಹಿಡಿತದಿಂದ ಪಕ್ಷವನ್ನು ಹೊರ ತರುವುದಕ್ಕಾಗಿ ಅವರು ನನ್ನ ಸ್ಪರ್ಧೆ ಬಗ್ಗೆ ಒಲವು ಹೊಂದಿರಬಹುದು ಎಂದು ಹೇಳಿದ್ದರು.


Share this with Friends

Related Post