Wed. Dec 25th, 2024

ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ‌:ಶ್ರೀವತ್ಸ

Share this with Friends

ಮೈಸೂರು,ಏ.7: ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಟಿ ಎಸ್ ಶ್ರೀವತ್ಸ ಭವಿಷ್ಯ ನುಡಿದರು.

ಪ್ರಧಾನಿ ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದೆ ಹಾಗಾಗಿ ಮತ್ತೆ ಪ್ರಧಾನಿಯಾಗಲಿದ್ದಾರೆ‌ ಎಂದು ಹೇಳಿದರು.

ನಗರದ ವಿದ್ಯಾರಣ್ಯಪುರಂ ಸುತ್ತಮುತ್ತ ಮೈಸೂರು ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಒಡೆಯರ್ ಅವರ ಪರ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ನೀಡಿ ಮನೆ ಮನೆಗೆ ತೆರಳಿ ಬಿರುಸಿನ ಮತ ಯಾಚಿಸಿ ಮಾತನಾಡಿದರು.

ದೇಶದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ವಿಶ್ವಮಟ್ಟದಲ್ಲಿ ಭಾರತವನ್ನು ವಿಶ್ವಗುರುವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಕೈಗೊಂಡಿರುವ ರಾಜ ತಾಂತ್ರಿಕ ವಿಷಯಗಳಿಂದ ವಿಶ್ವದ ಬಲಿಷ್ಠ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಸ್ಥಾನ ಪಡೆದಿದೆ.

ಅಲ್ಲದೆ ಮೋದಿವರು ಜನಪರ ಹಾಗೂ ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ, ಕೋಟ್ಯಂತರ ಜನರ ಆಶಯವಾಗಿದ್ದ ರಾಮ ಮಂದಿರ ನಿರ್ಮಾಣ ಸೇರಿ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದು ಶ್ರೀವತ್ಸ ತಿಳಿಸಿದರು.

ಪ್ರಚಾರ ಕಾರ್ಯದಲ್ಲಿ ಎಸಿ ಮೋರ್ಚಾ ಅಧ್ಯಕ್ಷ ವಿ ಶೈಲೇಂದ್ರ, ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು,ನಗರ ಪಾಲಿಕೆ ಮಾಜಿ ಸದಸ್ಯರಾದ ಪಾರ್ಥಸಾರಥಿ, ರಮೇಶ್, ಜಗದೀಶ್, ಕೆ ಆರ್ ಕ್ಷೇತ್ರದ ಅಧ್ಯಕ್ಷ ಗೋಪಾಲ್ ರಾಜ ಅರಸ್, ಜೆ. ರವಿ, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಗದೀಶ್, ಸಂದೀಪ್, ಧರ್ಮೇಂದ್ರ, ಶಿವಲಿಂಗ ಸ್ವಾಮಿ ಹಾಗೂ ಸ್ಥಳಿಯ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.


Share this with Friends

Related Post