Mon. Dec 23rd, 2024

ಖಾಸಗಿ ಬಸ್ ಉರುಳಿ ನಾಲ್ವರ ದುರ್ಮರಣ: ಚಿತ್ರದುರ್ಗ ಜಿಲ್ಲೆಯಲ್ಲಿ ಘಟನೆ

Share this with Friends

ಚಿತ್ರದುರ್ಗ,ಏ.7: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ನಾಲ್ಕು ಮಂದಿ ದಾರುಣವಾಗಿ‌ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರ್ ತಾಲೂಕಿನಲ್ಲಿ ನಡೆದಿದ್ದು ಘಟನೆಯಲ್ಲಿ ಎಂಟು ಮಂದಿ ಸ್ಥಿತಿ ಚಿಂತಾಜನಕವಾಗಿದೆ.

ಬಹುತೇಕರು ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದರು,ಹೊಳಲ್ಕೆರೆ ಪಟ್ಟಣದ ಕಣಿವೆ ಆಂಜನೇಯಸ್ವಾಮಿ ದೇವಾಲಯದ ಬಳಿ ಇಂದು ಮುಂಜಾನೆ ಸುಮಾರು 5 ಗಂಟೆ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ.

ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಅಪಘಾತಕ್ಕೆ ಕಾರಣ,ಈಗಾಗಲೇ ಈ ರಸ್ತೆಯಲ್ಲಿ ಬಹಳ ಅಪಘಾತಗಳಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು

ಘಟನೆಯಲ್ಲಿ ಗಾಯಗೊಂಡವರನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡರು ಜೊತೆಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.


Share this with Friends

Related Post