ಬೆಂಗಳೂರು,ಏ.10: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ.ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ.
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ 97.37 ಪ್ರಥಮ ಸ್ಥಾನ, ಉಡುಪಿ ಶೇ96.80 ದ್ವಿತೀಯ, ವಿಜಯಪುರ ಶೇ 94.89 ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ ಶೇ.72.86 ಕೊನೆ ಸ್ಥಾನದಲ್ಲಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್‌ಸೈಟ್ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ