Tue. Dec 24th, 2024

ಗುಂಡಿಗೆ‌ ಬಸ್ ಉರುಳಿ 15 ದುರ್ಮರಣ

Share this with Friends

ಛತ್ತೀಸಗಢ,ಏ.10: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತವಾಗಿದ್ದು 15 ಮಂದಿ ಮೃತಪಟ್ಟ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.

ಬಸ್ ಮುರುಮ್ ಮಣ್ಣಿನ ಗಣಿಗಾರಿಕೆ ಗುಂಡಿಗೆ ಬಿದ್ದಿದ್ದರಿಂದ ಕನಿಷ್ಠ 15 ಜನರು ಸಾವಿಗೀಡಾಗಿದ್ದು,14 ಮಂದಿ ಗಾಯಗೊಂಡಿದ್ದಾರೆ.

ಇವರೆಲ್ಲರೂ ಖಾಸಗಿ ಸಂಸ್ಥೆಯ ಉದ್ಯೋಗಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತರು ಡಿಸ್ಟಿಲರಿಯಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕುಮ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಪ್ರಿ ಗ್ರಾಮದ ಬಳಿ ನಿನ್ನೆ ರಾತ್ರಿ ಬಸ್‌ ಅಪಘಾತ ವಾಗಿದೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.

30 ಕ್ಕೂ ಹೆಚ್ಚು ಜನರಿದ್ದ ಬಸ್ ರಸ್ತೆಯಿಂದ ಸ್ಕಿಡ್ ಆಗಿ 40 ಅಡಿ ಆಳದ ಮುರುಮ್ ಗಣಿಯಲ್ಲಿ ಬಿದ್ದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 15 ಜನರು ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದ್ದಾರೆ


Share this with Friends

Related Post