Wed. Jan 8th, 2025

ಸಂಕಲ್ಪ ಪತ್ರ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

Share this with Friends

ನವದೆಹಲಿ,ಏ.14: ಲೋಕಸಭಾ ಚುನಾವಣೆಗೆ ಸಂಕಲ್ಪ ಪತ್ರಹೆಸರಿನಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದರು.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ ದಿನದಂದೇ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ವಿಶೇಷ.

ಅಂಬೇಡ್ಕರ್‌ ಅವರ ಪುತ್ಥಳಿಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪುಷ್ಪನಮನ ಸಲ್ಲಿಸಿದರು.

ಪ್ರತಿ ಕ್ಷಣವೂ ದೇಶಕ್ಕಾಗಿ ಎಂಬ ಚುನಾವಣಾ ಘೋಷವಾಕ್ಯದೊಂದಿಗೆ ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ನಂತರ ಪ್ರಧಾನಿ ಮೋದಿ ಅವರ 10 ವರ್ಷಗಳ ಸಾಧನೆ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.


Share this with Friends

Related Post