Wed. Jan 8th, 2025

ಸತ್ಯವನ್ನು ತಿರುಚುವುದು ಕಾಂಗ್ರೆಸ್ ನ ಪರಂಪರಾಗತ ಚಾಳಿ-ಜೆಡಿಎಸ್ ಟೀಕೆ

Share this with Friends

ಬೆಂಗಳೂರು, ಏ.14: ಸತ್ಯವನ್ನು ವಕ್ರೀಕರಿಸುವುದು,ತಿರುಚುವುದು ಕಾಂಗ್ರೆಸ್ ನ ಪುರಾತನ-ಪರಂಪರಾಗತ ಚಾಳಿ ಎಂದು ಜೆಡಿಎಸ್ ಟೀಕಿಸಿದೆ

75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್, ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಎಂದು ಜರಿದಿದೆ.

ತುರುವೇಕೆರೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ.ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹಸಿಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಜೆಡಿಎಸ್ ಟ್ವಿಟರ್ ನಲ್ಲಿ ಎಚ್ಚರಿಸಿದೆ.

ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ,ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಕುಮಾರಸ್ವಾಮಿಯವರೇ, ವಿಧವಾ ಪಿಂಚಣಿಯನ್ನು 200 ರಿಂದ 400ರೂ ಗೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ ಎಂದು ಪ್ರಶ್ನಿಸಿದೆ.

2018-19ರಲ್ಲಿ ಕಾಂಗ್ರೆಸ್ ನ ವಿರೋಧ ಲೆಕ್ಕಿಸದೆ ರೈತರ 25,000 ಕೋಟಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ; ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸ್ಸಿಗರೇ ನಿಮಗೆ ನೆನಪಿಲ್ಲವೇ ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ ಎಂದು ಹೇಳಿದೆ.

ಕಾಂಗ್ರೆಸ್ ಮಾಡಿದ್ದೇನು, ಲಾಟರಿ ಕಿಂಗ್ ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ಕರ್ನಾಟ ಕರ್ನಾಟಕ ಸರಕಾರ. ಅಷ್ಟೇ ಏಕೆ ಒಂದು ಕೈಯ್ಯಲ್ಲಿ 2000 ಕೊಟ್ಟು ಇನ್ನೊಂದು ಕೈಯ್ಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಢೋಂಗಿ ಗ್ಯಾರಂಟಿ ಕಾಂಗ್ರೆಸ್ ಸರಕಾರ, ಇಲ್ಲಾ ಎನ್ನಲು ಅವರಿಗೆ ನೈತಿಕತೆ ಇದೆಯೇ ಎಂದು ಜೆಡಿಎಸ್ ಕಾರವಾಗಿ ಪ್ರಶ್ನಿಸಿದೆ.


Share this with Friends

Related Post