Mon. Apr 21st, 2025

ನಟ ಸಲ್ಮಾನ್ ಖಾನ್ ನಿವಾಸದ ಬಳಿ ಗುಂಡಿನ ದಾಳಿ: ಇಬ್ಬರ ಬಂಧನ

Share this with Friends

ಮುಂಬೈ,ಏ.16: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ವಾಣಿಜ್ಯ ನಗರಿ ಮುಂಬೈನ ಬಾಂದ್ರಾ ವೆಸ್ಟ್‌ನಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಕಳೆದ ಭಾನುವಾರ ಗುಂಡಿನ ದಾಳಿ ನಡಿದಿತ್ತು.

ಘಟನೆಗೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಶೂಟ್ ಮಾಡಿದ್ದ ಆರೋಪಿಗಳನ್ನು ಗುಜರಾತ್ ನಲ್ಲಿ ಬಂಧಿಸಿ ಕರೆತರಲಾಗಿದೆ.

ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಕಳೆದ ರಾತ್ರಿ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಆರೋಪಿಗಳನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ಗುಜರಾತ್‌ನ ಭುಜ್ ನಲ್ಲಿ ಬಂಧಿಸಿ ರಾತ್ರಿಯೇ ಹೆಚ್ಚಿನ ವಿಚಾರಣೆಗೆ ಮುಂಬೈಗೆ ಕರೆತಂದಿದ್ದಾರೆ.

ಭಾನುವಾರ ಮುಂಜಾನೆ ಸಲ್ಮಾನ್ ಖಾನ್ ವಾಸವಾಗಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಶಂಕಿತರು ಹೆಲ್ಮೆಟ್ ಧರಿಸಿಕೊಂಡು ಮೋಟಾರ್ ಬೈಕ್ ನಲ್ಲಿ ಬಂದು ಗಾಳಿಯಲ್ಲಿ ಮೂರ್ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು.

ಘಟನಾ ಸ್ಥಳಕ್ಕೆ ಬಂದು ತಪಾಸಣೆ ನಡೆಸಿದ ಪೊಲೀಸರು ಇದೊಂದು ಸೂಕ್ಷ್ಮ ಯೋಜಿತ ದಾಳಿ ಎಂದು ಹೇಳಿದ್ದರು.ಜತೆಗೆ ಸಲ್ಮಾನ್ ನಿವಾಸದ ಸುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.


Share this with Friends

Related Post