Wed. Dec 25th, 2024

ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ-ಸಿದ್ದರಾಮಯ್ಯ

Share this with Friends

ಹಾಸನ,ಏ.19: ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ದ್ರೋಹ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಲಿಲ್ಲ ಏಕೆ ಎಂದು ಸಿದ್ದು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದರು. ಆದರೆ ಇದುವರೆಗೂ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ವಂಚಿಸಿದ್ದಾರೆ, ಈ ವಂಚನೆಯನ್ನು ಪ್ರಶ್ನಿಸುವುದನ್ನು ಬಿಟ್ಟು ಜೆಡಿಎಸ್ ನವರು ಬಿಜೆಪಿ ಜತೆಗೇ ಜಮೆಯಾಗಿದ್ದಾರೆ. ಇದು ಪ್ರಜ್ವಲ್ ರೇವಣ್ಣ ಅವರು ತಮಗೆ ಮತ ಹಾಕಿದವರಿಗೆ ಮಾಡಿದ ದ್ರೋಹ ಎಂದು ಗುಡುಗಿದರು.

ಮೋದಿ ಅವರ ದರ್ಬಾರ್ ನಲ್ಲಿ ಆದ ಬೆಲೆ ಏರಿಕೆಯಿಂದ ಬಸವಳಿದಿದ್ದ ರಾಜ್ಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ನಾವು ಐದು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು ನಾವು ನುಡಿದಂತೆ ನಡೆದಂತೆ ನಡೆದಿದ್ದೇವೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.


Share this with Friends

Related Post