Wed. Dec 25th, 2024

ನೇಹಾ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ :ಸಿದ್ದರಾಮಯ್ಯ

Share this with Friends

ಶಿವಮೊಗ್ಗ,ಏ.22: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸುತ್ತೇವೆ,ಇದಕ್ಕಾಗಿ ವಿಶೇಷ ಕೋರ್ಟ್ ಅನ್ನು ರಚಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿಗಳು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರೆ, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಕೊಡುತ್ತಾರೆ ಎಂದು ಸಿದ್ದರಾಮಯ್ಯ‌ ವಿಶ್ವಾಸ ವ್ಯಕ್ತಪಡಿಸಿದರು.


Share this with Friends

Related Post