ಶಿವಮೊಗ್ಗ,ಫೆ.9: ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಎನ್‌ಎಸ್‌ಯುಐ ಕಾರ್ಯಕರ್ತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಿಆರ್‌ಪಿಸಿ ಕಲಂ 157 ಅಡಿ ಚಕ್ರವರ್ತಿ ಸೂಲಿಬೆಲೆ ಎಫ್‌ಐಆರ್ ದಾಖಲಾಗಿದೆ.
ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ವಿಷಯದಲ್ಲಿ ಧಾರ್ಮಿಕ ಭಾವನೆ ಕೆರಳಿಸಿದ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಫೆ.26 ರಿಂದ ಮಾರ್ಚ್ 2 ರವರೆಗೆ ಪರೀಕ್ಷೆ ನಡೆಯಲಿದೆ.
ಐದು ವಿಷಯಗಳು ಬೆಳಗ್ಗೆ 10.15ಕ್ಕೆ ಆರಂಭವಾದರೆ ಮಾರ್ಚ್ 1ರಂದು ವಿಜ್ಞಾನ ಪರೀಕ್ಷೆ ಮಾತ್ರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.ಶುಕ್ರವಾರ ಮಾತ್ರ ಮಧ್ಯಾಹ್ನದ ನಂತರ ಪರೀಕ್ಷೆ ನಡೆಸುತ್ತಿರುವುದು ಯಾಕೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿತ್ತು.
ಶುಕ್ರವಾರ ಮಾತ್ರ ಮಧ್ಯಾಹ್ನ ಪರೀಕ್ಷೆ ಯಾತಕ್ಕಾಗಿ ನಮಾಜ್ ಸಮಯಕ್ಕಾ ಎಂದು ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಹಾಗಾಗಿ ಎನ್‌ಎಸ್‌ಯುಐ ಕಾರ್ಯಕರ್ತರು ಶಿವಮೊಗ್ಗದ ಜಯನಗರ ಠಾಣೆಗೆ ದೂರು ನೀಡಿದ್ದರು.ಇದೀಗ ಎಫ್ ಐ ಆರ್ ದಾಖಲಾಗಿದೆ.
ಮಂಡ್ಯ, ಕೆರಗೋಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ