Mon. Dec 23rd, 2024

ಪ್ರಣಾಳಿಕೆ ಕಾರ್ಡ್ ಹಂಚಿದ್ದೇವೆ:ಗಿಫ್ಟ್ ‌ಕಾರ್ಡ್ ಅಲ್ಲ:ಹೆಚ್‌‌ ಡಿ ಕೆಗೆ ಡಿಕೆಶಿ ತಿರುಗೇಟು

Share this with Friends

ಬೆಂಗಳೂರು, ಏ.26: ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್,ಯಾವುದೇ ಗಿಫ್ಟ್ ಕಾರ್ಡ್ ಹಂಚಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

10 ಸಾವಿರ ರೂ. ಮೌಲ್ಯದ ಗಿಫ್ಟ್‌ ಕಾರ್ಡ್‌ ಗನ್ನು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಕಡೆಯವರು ಮತದಾರರಿಗೆ ನೀಡಿದ್ದಾರೆ ಎಂಬ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಡಿಕೆಶಿ ಹೀಗೆ ವಾಗ್ದಾಳಿ ನಡೆಸಿದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ನಾನು ತೋರಿಸಲೆ, ಅವರು ಸತ್ಯ ಹರಿಶ್ಚಂದ್ರನ ಮೊಮ್ಮಗ ಎಂದು ವ್ಯಂಗ್ಯ ವಾಡಿದರು.

ನಾನೇನು ಎಂಬುದು ಜನಕ್ಕೆ ಗೊತ್ತಿದೆ, ಮುನಿರತ್ನ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಹಂಚುತ್ತಿದ್ದಾರೆ. ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್ ಎಂದು ಹೇಳಿದರು.

ಹೆದರಿಕೊಂಡು ರಣ ಹೇಡಿತರ ಬೇರೆ ಕಡೆ ಹೋಗಿದ್ದಾರೆ‌. ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು, ಅಮಾಯಕರನ್ನು ನಿಲ್ಲಿಸಿ ಮಂಡ್ಯಕ್ಕೆ ಓಡಿ ಹೋಗಿದ್ದಾರೆ ಎಂದು ಟಾಂಗ್ ನೀಡಿದರು.

ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ, ಮುನಿರತ್ನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ‌. ಸಿನಿಮಾ ಸ್ಟೈಲ್ ನಲ್ಲಿ ಮಾಡಿದ್ದಾರೆ, ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ ಎಂದು ಡಿಕೆಶಿ ಪ್ರಶ್ನಿಸಿದರು.

ಐಟಿ ದಾಳಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಕೇವಲ ಕಾಂಗ್ರೆಸ್ ಪಕ್ಷದ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಐಟಿ ಅಧಿಕಾರಿಗಳು ಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ, ಒಬ್ಬ ಬಿಜೆಪಿಯವರನ್ನು ಹಿಡಿದಿಲ್ಲ. ಐಟಿ ಅಧಿಕಾರಿಗಳಿಂದ ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಉತ್ತರಿಸಿದರು ಡಿ.ಕೆ.ಶಿವಕುಮಾರ್.


Share this with Friends

Related Post