Mon. Dec 23rd, 2024

ಪ್ರಜ್ವಲ್​, ಹೆಚ್​.ಡಿ ರೇವಣ್ಣ ವಿರುದ್ಧ ಆರೋಪ‌ ಸಾಬೀತಾದರೆ ಕಠಿಣ ಕ್ರಮ:ಪರಮೇಶ್ವರ್

Share this with Friends

ಸಂಸದ ಪ್ರಜ್ವಲ್​ ಮತ್ತು ಶಾಸಕ ಹೆಚ್​.ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ‌ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಹೆಚ್. ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ದೂರು ದಾಖಲಾಗಿದೆ, ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಸಂತ್ರಸ್ತರಿಗೆ ಭಯ ಹುಟ್ಟಿಸಿದರೆ ಅವರಿಗೆ ನಾವು ಸರ್ಕಾರ ವತಿಯಿಂದ ಭದ್ರತೆ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಿದ್ದೇವೆ. ತನಿಖಾ ತಂಡದಲ್ಲಿ ಎಸ್​ಪಿ ಮಟ್ಟದ ಅಧಿಕಾರಿಗಳು ಇದ್ದಾರೆ. ಎಸ್​​ಐಟಿ ಅಧಿಕಾರಿಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು.

ಅಧಿಕಾರಿಗಳು ಪೆನ್​ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ, ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಸ್​​ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲ ವಿಡಿಯೋಗಳನ್ನು ಎಫ್​ಎಸ್​ಲ್​​ಗೆ ಕಳುಹಿಸುತ್ತೇವೆ ಎಂದು ಹೇಳಿದರು.

ಹಾಸನ ಜಿಲ್ಲೆಯ ಹಲವು ಮಹಿಳೆಯರ ಜೊತೆಗಿನ ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಪ್ರಭಾವಿ ವ್ಯಕ್ತಿಯನ್ನು ಬಂಧಿಸುವಂತೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಆಗ್ರಹಿಸಿದೆ.

ಪೆನ್​​ಡ್ರೈವ್ ಮೂಲಕ ಮಹಿಳೆಯರ ಅಶ್ಲೀಲ ವೀಡಿಯೋ ಹಂಚಿ ಅವರ ಖಾಸಗಿ ಜೀವನಕ್ಕೆ ಧಕ್ಕೆ ತಂದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು, ಜನಪರ, ದಲಿತ, ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.


Share this with Friends

Related Post