Mon. Dec 23rd, 2024

ಪ್ರಜ್ವಲ್ ಅಧಿಕಾರ ದುರುಪಯೋಗ ಮಾಡಿಕೊಂಡು ಮಹಿಳೆಯರ ಮೇಲೆ ನೀಚ ಕೃತ್ಯ: ಲಕ್ಷ್ಮಿ ಹೆಬ್ಬಾಳ್ಕರ್

Share this with Friends

ಬೆಳಗಾವಿ,ಏ.30: ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರ ದುರುಪಯೋಗ ಮಾಡಿಕೊಂಡು ‌300ಕ್ಕೂ ಅಧಿಕ ಮಹಿಳೆಯರ ಮೇಲೆ ನೀಚ ಕೃತ್ಯ ಎಸಗಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡಾ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ, ದೇಶ ತಲೆ ತಗ್ಗಿಸುವ ಘಟನೆ ಇದು ಎಂದು ಕಿಡಿಕಾರಿದ್ದಾರೆ.

ಇದು ದೇಶದಲ್ಲೇ ಅತೀ ದೊಡ್ಡ ಅತ್ಯಾಚಾರ ಹಗರಣ. ಪ್ರಜ್ವಲ ರೇವಣ್ಣ ಸಂಸದರಾಗಿದ್ದು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅಧಿಕಾರ ದರ್ಪ, ಆಸೆ ಆಮಿಷ ತೋರಿಸಿ ನೂರಾರು ಮಹಿಳೆಯರನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೋ ನೋಡಿದ್ರೆ ಮಹಿಳೆಯರ ಜೀವಂತ ಕೊಲೆ ಆಗಿದೆ ಅನಿಸುತ್ತದೆ.ಯಾರೂ ವಿಡಿಯೋ ಶೇರ್ ಮಾಡಲು ಹೋಗಬೇಡಿ,ಇದರಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತದೆ ಎಂದು ಸಚಿವೆ ಮನವಿ ಮಾಡಿದರು.

ನಮ್ಮ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಇಂಟರ್ ಪೋಲ್ ಬಳಸಿ ಪ್ರಜ್ವಲ್‌ ನನ್ನು ಅರೆಸ್ಟ್ ಮಾಡಿ ಎಂದು ಕೇಂದ್ರ ಸರ್ಕಾರವನ್ನು ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದರು.


Share this with Friends

Related Post