Mon. Dec 23rd, 2024

ಶ್ರೀ ಮಲೆಮಹದೇಶ್ವರ ಹುಂಡಿಯಲ್ಲಿ 34 ದಿನಗಳಲ್ಲಿ 3.04 ಕೋಟಿ ರೂ. ಸಂಗ್ರಹ

Share this with Friends

ಚಾಮರಾಜನಗರ,ಮೇ.1: ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿಯಲ್ಲಿ 34 ದಿನಗಳ ಅವಧಿಯಲ್ಲಿ 3.04 ಕೋಟಿ ರೂ. ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್​​ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ, ಬೆಳಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.

ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.ಎಣಿಕೆ ಕಾರ್ಯ ನಿನ್ನೆ ರಾತ್ರಿ 11.30ಕ್ಕೆ ಮುಕ್ತಾಯವಾಯಿತು.

ಈ ಬಾರಿ ಯುಗಾದಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರಿಂದ ಭರ್ಜರಿ ಸಂಗ್ರಹವಾಗಿದೆ.


Share this with Friends

Related Post