Mon. Dec 23rd, 2024

ಪ್ರಜ್ವಲ್ ಕೇಳಿದಂತೆ ಸಮಯ ಕೊಡಲು ಆಗಲ್ಲ:‌ ಪರಮೇಶ್ವರ್

Share this with Friends

ಬೆಂಗಳೂರು,ಮೇ.2: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಸಂಸದ ಪ್ರಜ್ವಲ್ ರೇವಣ್ಣ ಕೇಳಿದಂತೆ ಸಮಯ ಕೊಡಲು ಆಗಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ವಕೀಲರ ಮೂಲಕ ಒಂದು ವಾರ ಸಮಯ ಕೇಳಿದ್ದಾರೆ. ಆದರೆ ಸೆಕ್ಷನ್ 41 (ಎ) ನಲ್ಲಿ ಸಮಯವನ್ನ ಕೊಡಲು ಬರುವುದಿಲ್ಲ ಎಂದು ತಿಳಿಸಿದರು.

ಎಸ್‍ಐಟಿ ನೋಟಿಸ್ ನೀಡಿದೆ, ರೇವಣ್ಣ ವಿಚಾರಣೆಗೆ ಹಾಜಾರಾಗುವುದಾಗಿ ಹೇಳಿದ್ದಾರೆ, ಸಿಎಂ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಘಟನೆಯ ಬಗ್ಗೆ ವಿವರಿಸಿ, ಡಿಪ್ಲಾಮೆಟಿಕ್ ಪಾಸ್ ಪೋರ್ಟ್ ರದ್ದು ಮಾಡಿ ಆದಷ್ಟು ಬೇಗ ಕರೆದುಕೊಂಡು ಬರಲು ಸಹಕರಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯವರು ಕನ್ಫ್ಯೂಷನ್ ಕ್ರಿಯೆಟ್ ಮಾಡುತ್ತಿರುತ್ತಾರೆ. ಎಸ್‍ಐಟಿ ಅಧಿಕಾರಿಗಳು, ಕಾನೂನು ಸಲಹೆಗಾರರ ಜೊತೆ ಲೀಗಲ್ ಅಭಿಪ್ರಾಯ ಪಡೆದು ಮುಂದುವರಿಯುವುದಾಗಿ ತಿಳಿಸಿದ್ದಾರೆ ಎಂದು ಪರಮೆಶ್ವರ್ ಹೇಳಿದರು.


Share this with Friends

Related Post