Mon. Dec 23rd, 2024

ಕ್ರೂಸರ್ ಅಪಘಾತ:ಮೂವರು ಯುವಕರ ದುರ್ಮರಣ

Share this with Friends

ಬೀದರ್,ಮೇ.2: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಧಾರಣವಾಗಿ ಮೃತಪಟ್ಟ ಘಟನೆ ಬೀದರ್ ತಾಲೂಕಿನಲ್ಲಿ ನಡೆದಿದೆ.

ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಕ್ರೂಸರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಪ್ರದೀಪ್ (೨೫) ವಿನೋದ್ (26) ವರ್ಧೀಶ್ (25) ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ಇನ್ನು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಟ್ನಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರೂಸರ್ ಮೇಲೆತ್ತಲು ಸಹಕರಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.


Share this with Friends

Related Post