Mon. Dec 23rd, 2024

ಪ್ರಜ್ವಲ್, ರೇವಣ್ಣ ಪ್ರಕರಣ: ಎಸ್ ಐ ಟಿಯಿಂದ ಸಾಕ್ಷ್ಯಾಧಾರ ಸಂಗ್ರಹ

Share this with Friends

ಹಾಸನ,ಮೇ.3: ಸಂಸದ ಪ್ರಜ್ವಲ್‌ ರೇವಣ್ಣ, ಮಾಜಿ ಸಚಿವ ಎಚ್‌.ಡಿ. ರೇವಣ್ಣ ಪ್ರಕರಣ ಸಂಬಂಧ ಎಸ್ಐಟಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.

ಎಸ್ಐಟಿ ತಂಡ ಬೆಂಗಳೂರು ಮತ್ತು ಹಾಸನದ ಮನೆ ಮತ್ತು ಫಾರ್ಮ್ ಹೌಸ್ ಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ.

ವಿಶೇಷ ತನಿಖಾ ತಂಡವು ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರಂ ಹೌಸ್‌ಗಳಲ್ಲಿ ತೀವ್ರ ತಪಾಸಣೆ ನಡೆಸಿದೆ.

ಬೆಳ್ಳಂಬೆಳಿಗ್ಗೆ ಪ್ರಜ್ವಲ್ ಅವರ ಹಾಸನ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ
ಎಸ್ಐಟಿ ಅಧಿಕಾರಿಗಳ ತಂಡ ದಾಳಿ
ಮಾಡಿ ಪರಿಶೀಲನೆ ನಡೆಸಿತು

ನಿನ್ನೆ ತಡರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಒಟ್ಟು ಮೂರು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


Share this with Friends

Related Post